Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಮಂಗಳೂರು: ಅಕ್ರಮವಾಗಿ ಸಾಗಾಟ – 2.01 ಕೋ.ರೂ. ಮೌಲ್ಯದ ಚಿನ್ನ ವಶ

ಮಂಗಳೂರು, ನ 11 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ನಾಲ್ವರು ಪ್ರಯಾಣಿಕರನ್ನು ಪರಿಶೀಲಿಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆಯಾಗಿದ್ದು, ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24 ಕ್ಯಾರೆಟ್ ನ 3.895 ಕೆ.ಜಿ. ತೂಕದ ಒಟ್ಟು 2.01 ಕೋ.ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರು ನ.10ರಂದು ದುಬೈನಿಂದ ಬಂದ ವಿಮಾನದಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ ನಾಲ್ಕು ಮಂದಿ ಪ್ರಯಾಣಿಕರು ಟ್ರಾಲಿ ಬ್ಯಾಗ್ ಗಳಲ್ಲಿ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆದುಕೊಂಡಿದ್ದಾರೆ.

No Comments

Leave A Comment