Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಗ್ರಾಹಕರ ಜೇಬಿಗೆ ಕತ್ತರಿ: ನಂದಿನ ಹಾಲು, ಮೊಸರಿನ ದರ ಲೀಟರ್ ಗೆ ತಲಾ 3 ರುಪಾಯಿ ಹೆಚ್ಚಳ!

ಬೆಂಗಳೂರು: ರೈತರಿಗೆ ಪ್ರೋತ್ಸಾಹದನವಾಗಿ ನೀಡುವ ಸಲುವಾಗಿ ನಂದಿನ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ.

ಹಾಲು, ಮೊಸರಿನ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಟೋನ್ಡ್ ಹಾಲಿನ ದರ 37 ರಿಂದ 40 ರುಪಾಯಿಗೆ ಹೆಚ್ಚಳ ಮಾಡಲಾಗಿದೆ. ಇನ್ನು ಸ್ಪೆಷನ್ ಹಾಲಿನ ದರ 43 ರಿಂದ 46 ರೂಪಾಯಿಗೆ, ಸಮೃದ್ಧಿ ಹಾಲಿನ ದರ 48 ರಿಂದ 51 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಹೋಮೋಜಿನೈಸ್ಡ್ ಹಾಲು 38 ರೂ. ರಿಂದ 41 ರೂ.ಗೆ ಏರಿಕೆ. ಹೊಮೊಜಿನೈಸ್ಡ್ ಹಸುವಿನ ಹಾಲು 42 ರೂ. ರಿಂದ 45 ರೂ.ಗೆ ಏರಿಕೆ. ಶುಭಂ ಹಾಲು 43 ರೂ. ರಿಂದ 46 ರೂ.ಗೆ ಏರಿಕೆ. ಹೊಮೊಜಿನೈಸ್ಡ್ ಸ್ಟ್ಯಾಂಡಡೈಸ್ಡರ್ ಹಾಲು 44 ರೂ. ರಿಂದ 47 ರೂ.ಗೆ ಏರಿಕೆ. ಸಂತೃಪ್ತಿ ಹಾಲು 50 ರೂ. ರಿಂದ 53 ರೂ.ಗೆ ಏರಿಕೆ. ಡಬಲ್ ಟೋನ್ಡ್ ಹಾಲು 36 ರೂ. ರಿಂದ 39 ರೂ.ಗೆ ಏರಿಕೆಯಾಗಿದೆ.

ಇನ್ನು ಮೊಸರಿನ ದರವನ್ನು ಲೀಟರ್ ಗೆ 45 ರಿಂದ 48 ರೂಪಾಯಿಗೆ ಏರಿಕೆ ಮಾಡಲಾಗಿದೆ.

No Comments

Leave A Comment