Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಂಗಳೂರು: ಕೊನೆಗೂ ಸುರತ್ಕಲ್ ಟೋಲ್ ಗೇಟ್ ರದ್ದು – ಟ್ವೀಟ್ ಮೂಲಕ ನಳಿನ್ ಮಾಹಿತಿ

ಮಂಗಳೂರು, ನ 14.: ಕಳೆದ ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಟೋಲ್‌ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಇನ್ನು ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ರದ್ದುಗೊಳಿಸುವಂತೆ ಸಮಾನಮನಸ್ಕರು ಕಳೆದ ಹಲವು ದಿನಗಳಿಂದ ರಾತ್ರಿ ಹಗಲು ಪ್ರತಿಭಟನೆ ನಡೆಸುತ್ತಿದ್ದರು.

No Comments

Leave A Comment