Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ – ಸವಾರ ಮೃತ್ಯು

ಬಂಟ್ವಾಳ, ನ 17. ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೬ರ ಗುರುವಾರ ನಡೆದಿದೆ.

ಕಳ್ಳಿಗೆ ನಿವಾಸಿ ಮುಜಾಮಿಲ್ (18) ಮೃತಪಟ್ಟ ಯುವಕ. ನ. 9 ರಂದು ರಾತ್ರಿ ವೇಳೆ ನಂ.ಪ್ಲೇಟ್ ಇಲ್ಲದ ಯಮಹಾ ಬೈಕ್ ನಲ್ಲಿ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿಕೊಂಡು ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆ ಬಿದ್ದ ಪರಿಣಾಮ ತಲೆಗೆ ಗಂಭೀರ ವಾಗಿ ಗಾಯವಾಗಿತ್ತು.

ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ನೀಡಲಾಗಿತ್ತು.ಆದರೆ ತಲೆಗೆ ಅತಿಯಾದ ಏಟಾದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಆತ ಇಂದು ಮೃತಪಟ್ಟ ಘಟನೆ ನಡೆದಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

No Comments

Leave A Comment