Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಏಷ್ಯನ್ ಕಪ್‌ನಲ್ಲಿ ಮಣಿಕಾ ಬಾತ್ರಾಗೆ ಕಂಚು

ನವದೆಹಲಿ, ನ 19. ಮಣಿಕಾ ಬಾತ್ರಾ ಅವರು ಏಷ್ಯನ್ ಕಪ್ ಟೇಬಲ್ ಟೆನಿಸ್ ಪಂದ್ಯದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಆ ಮೂಲಕ ಏಷ್ಯನ್ ಕಪ್ ಟೇಬಲ್ ಟೆನಿಸ್ ಪಂದ್ಯದಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಪ್ಯಾಡ್ಲರ್ ಎಂಬ ಇತಿಹಾಸ ನಿರ್ಮಿಸಿದ್ದಾರೆ.

ವಿಶ್ವದ ನಂ. 6 ಮತ್ತು 3 ಬಾರಿ ಏಷ್ಯನ್ ಚಾಂಪಿಯನ್ ಆಗಿದ್ದ ಹಿನಾ ಹಯಾತಾ ಅವರನ್ನು 4-2ರಿಂದ ಸೋಲಿಸಿ ಮಣಿಕಾ ಅವರು ಕಂಚು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಮಣಿಕಾ ಬಾತ್ರಾ ಅವರ ಸಾಧನೆಗೆ ಕ್ರೀಡಾ ಪ್ರೇಮಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

No Comments

Leave A Comment