Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಹಿರಿಯ ನಟಿ ತಬಸ್ಸುಮ್ ಹೃದಯಾಘಾತದಿಂದ ನಿಧನ

ಮುಂಬೈ: ಹಿರಿಯ ನಟಿ ತಬಸ್ಸುಮ್ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಬಾಲ ಕಲಾವಿದೆಯಾಗಿ ಮತ್ತು ಜನಪ್ರಿಯ ದೂರದರ್ಶನ ಟಾಕ್ ಶೋ ಫೂಲ್ ಖಿಲೆ ಹೈ ಗುಲ್ಶನ್ ಗುಲ್ಶನ್ ನಿರೂಪಕಿಯಾಗಿ ಹೆಸರುವಾಸಿಯಾಗಿದ್ದ ತಬಸ್ಸುಮ್  ಹೃದಯ ಸ್ತಂಭನದ ನಂತರ ಸಾವನ್ನಪ್ಪಿದ್ದಾರೆ ಎಂದು ಅವರ ಪುತ್ರ ಹೋಶಾಂಗ್ ಗೋವಿಲ್ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಅವರು  ಆಸ್ಪತ್ರೆಗೆ ದಾಖಲಾಗಿದ್ದರು.  ಗ್ಯಾಸ್ಟ್ರೋ ಸಮಸ್ಯೆಯಿಂದ ತಪಾಸಣೆಗಾಗಿ ಆಸ್ಪತ್ರೆಗೆ ಹೋದಾಗ ಶುಕ್ರವಾರ ರಾತ್ರಿ 8.40 ಮತ್ತು 8.42 ಕ್ಕೆ  ಎರಡು ಬಾರಿ ಹೃದಯಾಘಾತದ ನಂತರ ಅವರು ಸಾವನ್ನಪ್ಪಿದ್ದಾಗಿ ಹೋಶಾಂಗ್  ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

 ತಬಸ್ಸುಮ್  ಬಾಲ ಕಲಾವಿದೆಯಾಗಿ ಬೇಬಿ ತಬಸ್ಸುಮ್ ಎಂದು ಖ್ಯಾತರಾಗಿದ್ದರು. 1940 ರ ದಶಕದ ಉತ್ತರಾರ್ಧದಲ್ಲಿ ನರ್ಗೀಸ್, ಮೇರಾ ಸುಹಾಗ್, ಮಂಜಧರ್ ಮತ್ತು ಬರಿ ಬೆಹೆನ್‌ನಂತಹ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ದೂರದರ್ಶನದಲ್ಲಿ 1972 ರಿಂದ 1993 ರವರೆಗೆ ಫೂಲ್ ಖಿಲೆ ಹೈ ಗುಲ್ಶನ್ ಗುಲ್ಶನ್ ಎಂಬ ಪ್ರಸಿದ್ಧ ಟಾಕ್ ಶೋ ನಡೆಸಿಕೊಡುತ್ತಿದ್ದರು.

No Comments

Leave A Comment