Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉಡುಪಿ: ‘ಕರಾವಳಿಯಲ್ಲಿ ಎನ್‌ಐಎ ಘಟನೆ ಸ್ಥಾಪನೆಗೆ ಸಂಸತ್‌ನಲ್ಲಿ ಪ್ರಸ್ತಾವ’-ತೇಜಸ್ವಿ ಸೂರ್ಯ

ಉಡುಪಿ, ನ 22 . ಕರ್ನಾಟಕ ಕರಾವಳಿ ವಿಚ್ಛಿದ್ರ ಶಕ್ತಿಗಳ ಕೇಂದ್ರವಾಗುತ್ತಿದೆ. ಕರಾವಳಿಯಲ್ಲಿ ಎನ್‌ಐಎ ಘಟನೆ ಸ್ಥಾಪನೆ ಮಾಡುವ ಸಂಬಂಧ ಸಂಸತ್ತಿನಲ್ಲಿ ವಿಷಯ ಪ್ರಸ್ತಾಪ ಮಾಡುವುದಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕರಾವಳಿಯಲ್ಲಿ ಎನ್ಐಎ ಘಟನೆ ಸ್ಥಾಪನೆಯ ಅಗತ್ಯವಿದೆ ಎಂದು ಈ ಹಿಂದೆಯೇ ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ್ದೇನೆ. ಮತ್ತೊಮ್ಮೆ ಈ ಬಗ್ಗೆ ಪ್ರಸ್ತಾಪಿಸುತ್ತೇನೆ. ಸಂಸತ್‌ನಲ್ಲಿಯೂ ಈ ಕುರಿತು ಪ್ರಸ್ತಾಪ ಮಾಡುತ್ತೇನೆ ಎಂದರು.

ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶ. ಆರ್ಥಿಕ ಶಕ್ತಿ ಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ. ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು. ರಾಜ್ಯದ ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ. ಪಿಎಫ್ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು ಹಾಕುತ್ತೇವೆ. ಅಲ್ಲಿಯ ತನಕ ನಮ್ಮ ಸರಕಾರಗಳು ವಿಶ್ರಮಿಸುವುದಿಲ್ಲ ಎಂದವರು ತಿಳಿಸಿದರು.

ಈವರೆಗೆ ರಾಜ್ಯದಲ್ಲಿ ದೊಡ್ಡ ಮಟ್ಟದ ಚಟುವಟಿಕೆ ನಡೆದಿಲ್ಲ. ಈ ಒಂದು ಘಟನೆ ರಾಜ್ಯವನ್ನು ಎಚ್ಚರಿಸಲಿದೆ. ಕರಾವಳಿಯಲ್ಲೇ ಒಂದು ಎನ್ಐಎ ಕಚೇರಿ ಬೇಕಾಗಿದೆ. ಪೊಲೀಸ್- ಇಂಟೆಲಿಜನ್ಸ್ ಎನ್ಐಎ ಜೊತೆಯಾಗಿ ಕೆಲಸ ಮಾಡಿದರೆ ಇಂತಹ ಘಟನೆ ತಡೆಗಟ್ಟಬಹುದು ಎಂದರು.

ರಾಜ್ಯದ ಜನರ ಜೀವ ಮತ್ತ ವಸ್ತುಗಳ ಸಂರಕ್ಷಣೆ ನಮ್ಮ ಕರ್ತವ್ಯ. ನಾವು ಓಟ್ ಬ್ಯಾಂಕ್‌ಗೆ ಮುಲಾಜು ಬಿದ್ದು ರಾಜಕೀಯ ಮಾಡಲ್ಲ. ರಾಷ್ಟ್ರೀಯ, ರಾಜ್ಯದ ಸುರಕ್ಷತೆಗೆ ನಮ್ಮ ಆದ್ಯತೆ. ದೇಶದ ಸುರಕ್ಷತೆ ವಿಚಾರದಲ್ಲಿ ರಾಇ ಮಾಡಲಾರೆವು. ಸ್ಪೋಟದ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದವರು ಇದೇ ವೇಳೆ ಎಚ್ಚರಿಸಿದರು.

No Comments

Leave A Comment