Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಡ್ರೋನ್‌ನಿಂದ ಬಿದ್ದ ಐಇಡಿಗಳು, ಪಿಸ್ತೂಲ್‍ಗಳು, 5 ಲಕ್ಷ ರೂ. ನಗದನ್ನು ವಶಪಡಿಸಿಕೊಂಡ ಪೊಲೀಸರು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಗಡಿಯುದ್ದಕ್ಕೂ ಡ್ರೋನ್‌ನಿಂದ ಬೀಳಿಸಲಾದ ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು), ಪಿಸ್ತೂಲ್‌ಗಳು ಮತ್ತು ನಗದನ್ನು ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಗಡಿಯಿಂದ ಸುಮಾರು ಐದಾರು ಕಿಲೋಮೀಟರ್ ದೂರದಲ್ಲಿರುವ ರಾಮಗಢ ಮತ್ತು ವಿಜಯಪುರದ ನಡುವೆ ಬೆಳಿಗ್ಗೆ 6.15 ರ ಸುಮಾರಿಗೆ ಸ್ಥಳೀಯ ಜನರು ಡ್ರೋನ್‌ ಮೂಲಕ ಸರಕು ರವಾನೆ ಮಾಡುತ್ತಿರುವುದನ್ನು ನೋಡಿದ್ದಾರೆ ಮತ್ತು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ ಅಭಿಷೇಕ್ ಮಹಾಜನ್ ಸುದ್ದಿಗಾರರಿಗೆ ತಿಳಿಸಿದರು.

ಬಾಂಬ್ ನಿಷ್ಕ್ರಿಯ ದಳವು ಡಿಟೋನೇಟರ್‌ಗಳೊಂದಿಗೆ ಜೋಡಿಸದ ಎರಡು ಐಇಡಿಗಳು, ಎರಡು ಚೈನೀಸ್ ಪಿಸ್ತೂಲ್‌ಗಳು, 60 ರೌಂಡ್‌ಗಳ 4 ಮ್ಯಾಗಜೀನ್‌ಗಳು ಮತ್ತು 500 ರೂ. ಮುಖಬೆಲೆಯ 5 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಇವುಗಳನ್ನು ಉಕ್ಕಿನ ತಳವನ್ನು ಹೊಂದಿದ್ದ ಮರದ ಪೆಟ್ಟಿಗೆಯಲ್ಲಿ ಮುಚ್ಚಲಾಗಿದೆ. ಇದು ಗಡಿಯಾಚೆಗಿನ ಡ್ರೋನ್ ಡ್ರಾಪಿಂಗ್ ಪ್ರಕರಣವಾಗಿದ್ದು, ಈ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಎಸ್‌ಪಿ ಹೇಳಿದರು.

‘ಯಾವುದಾದರೂ ಅಹಿತಕರ ಘಟನೆಗೆ ಇವುಗಳನ್ನು ಬಳಸುವ ಯೋಜನೆ ಹೊಂದಿತ್ತು. ಆದರೆ, ಆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಪೊಲೀಸ್ ತಂಡ ಮತ್ತು ಸ್ಥಳೀಯ ಜನರಿಗೆ ಬಹುಮಾನ ನೀಡಲಾಗುವುದು ಎಂದು ಹೇಳಿದರು.

No Comments

Leave A Comment