Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ದೆಹಲಿಯ ಚಾಂದ್ನಿ ಚೌಕ್ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ: 50 ಅಂಗಡಿಗಳು ಭಸ್ಮ

ದೆಹಲಿ: ಉತ್ತರ ದೆಹಲಿಯ ಚಾಂದ್ನಿ ಚೌಕ್‌ನ ಭಾಗೀರಥ್ ಪ್ಯಾಲೇಸ್ ಪ್ರದೇಶದಲ್ಲಿರುವ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 50 ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಡುತ್ತಿದ್ದಾರೆ.  ಅಗ್ನಿಶಾಮಕ ದಳದ ಪ್ರಕಾರ, ಗುರುವಾರ ರಾತ್ರಿ 9.19 ಕ್ಕೆ ಬೆಂಕಿಯ ಬಗ್ಗೆ ಕರೆ ಬಂದಿತು ಮತ್ತು 40 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದವು.

ಈವರೆಗೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಶೇ. 30ರಷ್ಟು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಶುಕ್ರವಾರ ಬೆಳಿಗ್ಗೆಯೂ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಮಾರುಕಟ್ಟೆಯ ಇತರೆ ಅಂಗಡಿಗಳಿಗೂ ವ್ಯಾಪಿಸಿದೆ ಎನ್ನಲಾಗಿದೆ.  ಇಲ್ಲಿಯವರೆಗೆ ಬೆಂಕಿ ಹತೋಟಿಗೆ ಬಂದಿಲ್ಲ. ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳದಲ್ಲಿದ್ದಾರೆ. ಬೆಂಕಿ ಅವಘಡದ ಹಿಂದಿನ ಕಾರಣ ತಿಳಿದು ಬಂದಿಲ್ಲ.

No Comments

Leave A Comment