Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಛತ್ರಪತಿ ಶಿವಾಜಿ ಕುರಿತು ವಿವಾದಾತ್ಮಕ ಹೇಳಿಕೆ: ಮಹಾರಾಷ್ಟ್ರ ರಾಜ್ಯಪಾಲ ಕೊಶ್ಯಾರಿಗೆ ದೆಹಲಿಗೆ ಬುಲಾವ್

ಮುಂಬೈ: ಮರಾಠಿ ಐಕಾನ್ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ತೀವ್ರ ಟೀಕೆಗೆ ಗುರಿಯಾಗಿರುವ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ದೆಹಲಿಗೆ ಬರುವಂತೆ ಸೂಚಿಸಲಾಗಿದೆ.

ಕೊಶ್ಯಾರಿ ಹೇಳಿಕೆಗೆ ಮಹಾರಾಷ್ಟ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಮರಾಠ ಸಂಘಟನೆಗಳು ಮತ್ತು ವಿರೋಧ ಪಕ್ಷದ ನಾಯಕರು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿವೆ.

ವಿವಾದ ಸೃಷ್ಟಿಸುತ್ತಿರುವ ಮಹಾರಾಷ್ಟ್ರ ರಾಜ್ಯಪಾಲರ ಬಗ್ಗೆ ಬಿಜೆಪಿಯ ಉನ್ನತ ನಾಯಕರು ಸಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ರಾಜ್ಯಪಾಲ ಕೊಶ್ಯಾರಿ ಅವರಿಗೆ ಛೀಮಾರಿ ಹಾಕಲಾಗುತ್ತಿದ್ದು, ಅವರನ್ನು ಚಿಕ್ಕ ರಾಜ್ಯಕ್ಕೆ ವರ್ಗಾಯಿಸಬಹುದು. ರಾಜ್ಯಪಾಲರು ರಾಜ್ಯದ ನಾಯಕರು ಮತ್ತು ಐಕಾನ್‌ಗಳ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಪ್ರತಿಪಕ್ಷಗಳ ಕೈಗೆ ಅಸ್ತ್ರಗಳನ್ನು ನೀಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ” ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಪ್ರತಿಪಕ್ಷಗಳು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದು, ಛತ್ರಪತಿ ಶಿವಾಜಿ ಮಹಾರಾಜರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೊಶ್ಯಾರಿ ವಿರುದ್ಧ ಮಹಾರಾಷ್ಟ್ರದ ಬಗ್ಗೆ ಕಾಳಜಿ ಇರುವವರು ಒಗ್ಗೂಡಬೇಕು ಎಂದು ಮಾಜಿ ಸಿಎಂ ಉದ್ಧವ್ ಠಾಕ್ರೆ ಗುರುವಾರ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಪ್ರತಿಪಕ್ಷಗಳಿಗೆ ಮನವಿ ಮಾಡಿದ್ದರು.

ಹಿಂದಿನ ದಿನಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಐಕಾನ್ ಆಗಿದ್ದರು. ಈಗ ಬಿಆರ್ ಅಂಬೇಡ್ಕರ್ ಮತ್ತು ನಿತಿನ್ ಗಡ್ಕರಿ ನಮಗೆ ಐಕಾನ್ ಇದ್ದಾರೆ ಎಂದು ಕೊಶ್ಯಾರಿ ಕಳೆದ ಶನಿವಾರ ಹೇಳಿದ್ದರು. ನಂತರ ಗಡ್ಕರಿ” ಶಿವಾಜಿ ಮಹಾರಾಜ್ ನಮ್ಮ ದೇವರು. ನಾವು ಅವರನ್ನು ನಮ್ಮ ಹೆತ್ತವರಿಗಿಂತ ಹೆಚ್ಚು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.

No Comments

Leave A Comment