Log In
BREAKING NEWS >
ಉಡುಪಿಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಗುರುವಾರದ೦ದು ಅದ್ದೂರಿಯ ಅಕ್ಕಿಮುಹೂರ್ತ ಕಾರ್ಯಕ್ರಮ ಸ೦ಪನ್ನ.....

ಉಡುಪಿ: ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

ಉಡುಪಿ, ಡಿ 11:ಉಡುಪಿ ಸಬ್ ಜೈಲಿನಲ್ಲಿ ವಿಚಾರಣಾ ದಿನ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ.

ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಮುಂಜಾನೆ ಸುಮಾರು 5 ಗಂಟೆಗೆ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿ ಈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೇಣು ಬಿಗಿದುಕೊಳ್ಳುತ್ತಿರುವುದನ್ನು ಗಮನಿಸಿದ ಸಹ ಕೈದಿಗಳು ಕೂಡಲೇ ಕುಣಿಕೆಯಿಂದ ಬಿಡಿಸಿದ್ದು, ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಆತ ಸಾವನ್ನಪ್ಪಿದ.

ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದ. ಕುರುಪ್ ಸಿನಿಮಾ ಮಾದರಿಯಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಈತ ಸುಟ್ಟ ಕಾರಿನಲ್ಲಿ ತಾನೇ ಸತ್ತಿರುವುದಾಗಿ ಬಿಂಬಿಸಲು ಹೊರಟು ಬಂಧಿಯಾಗಿದ್ದ. ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರು ಒತ್ತಿನೆಣೆ ಹೇನ್ಬೇರ್‌ನಲ್ಲಿ ನಡೆದಿದ್ದ ಪ್ರಕರಣ ಇದಾಗಿತ್ತು.

No Comments

Leave A Comment