Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಹಿಮಾಚಲ ಪ್ರದೇಶದ 15 ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಶಿಮ್ಲಾ: ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್  ಅಧಿಕಾರ ವಹಿಸಿಕೊಂಡರು.

ಮುಕೇಶ್ ಅಗ್ನಿಹೋತ್ರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರಳೇಕರ್ ಪ್ರಮಾಣ ವಚನ ಬೋಧಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿಗೆ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

No Comments

Leave A Comment