Log In
BREAKING NEWS >
ಜನವರಿ 29ರಿ೦ದ 31ರವರೆಗೆ ಅಮ್ಮು೦ಜೆ ಶ್ರೀದಾಮೋದರ ದೇವಸ್ಥಾನದ ಪ್ರತಿಪ್ರತಿಷ್ಠಾ ದಶಮನೋತ್ಸವ ಕಾರ್ಯಕ್ರಮದ ಸ೦ಭ್ರಮವು ಜರಗಲಿದೆ-30ರ ಸೋಮವಾರದ೦ದು ಶ್ರೀದಾಮೋದರ ದೇವರಿಗೆ ಚಿನ್ನದ ಕವಚ ಸಮರ್ಪಣಾ ಕಾರ್ಯಕ್ರಮವು ಜರಗಲಿದೆ....

ಹೊಸಪೇಟೆ: ಕಾಲುವೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳ ದುರ್ಮರಣ

ಬಳ್ಳಾರಿ: ಕಾಲುವೆಯಲ್ಲಿ ಈಜಲು ಹೋಗಿದ್ದ ಆರು ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾಗಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಹೊಸಪೇಟೆಯ ಹಾಗೂ ಕೊಪ್ಪಳದ ನಿವಾಸಿಗಳಾದ ಯಶವಂತ್, ಅಂಜಿನಿ, ಗುರುರಾಜ್ ಎಂದು ಗುರುತಿಸಲಾಗಿದೆ.

ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಓದುತ್ತಿದ್ದ 6 ವಿದ್ಯಾರ್ಥಿಗಳ ತಂಡ ಈಜಲು ಹೋಗಿತ್ತು. ಈ ವೇಳೆ ಮೂವರು ನೀರಿನಲ್ಲಿ ಮಳುಗಿದ್ದು ಇನ್ನು ಮೂವರು ಬದುಕುಳಿದಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹೊಸಪೇಟೆಯ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದರು.

ಇನ್ನು ಬದುಕುಳಿದಿರುವ ಮೂವರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

No Comments

Leave A Comment