Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 13 ಕೋಟಿ ರೂ. ವೆಚ್ಚದ ನದಿ ಸೇತುವೆ!

ಬಿಹಾರ:ಡಿ 18. ಬಿಹಾರದ ಬೇಗುಸರಾಯ್‍ನಲ್ಲಿ ಗಂಡಕ್ ನದಿನಲ್ಲಿ ನಿರ್ಮಿಸಲಾಗಿದ್ದ 13 ಕೋಟಿ ರೂ. ವೆಚ್ಚದ 206 ಮೀಟರ್ ಉದ್ದದ ಬ್ರಿಡ್ಜ್ ಉದ್ಘಾಟನೆ ಮುನ್ನ ಕುಸಿದು ಬಿದ್ದಿರುವ ಘಟನೆ ವರದಿಯಾಗಿದೆ.

ಡಿಸೆಂಬರ್‌ 15ರಂದೇ ಸೇತುವೆಯ ಮುಂಭಾಗದಲ್ಲಿ ಬಿರುಕು ಬಿಟ್ಟಿದ್ದು ಗೊತ್ತಾಗಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿಯನ್ನೂ ನೀಡಲಾಗಿತ್ತು. ಆದರೆ ಸೇತುವೆ ದುರಸ್ತಿಗೊಳಿಸುವ ಮುನ್ನವೇ ಭಾನುವಾರ ಕುಸಿದಿದ್ದು,ಬ್ರಿಡ್ಜ್‌ ಮುಂಭಾಗ ಕುಸಿದು ನದಿ ಪಾಲಾಗಿದೆ ಎಂದು ವರದಿಯಾಗಿದೆ.

ಇನ್ನು 2016ರಲ್ಲಿ ಮುಖ್ಯಮಂತ್ರಿ ನರ್ಬಾಡ್ ಯೋಜನೆಯಡಿಯಲ್ಲಿ ಈ ಬ್ರಿಡ್ಜ್ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಆ ಬಳಿಕ 2017ರಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಉದ್ಘಾಟನೆಗೊಂಡಿರಲಿಲ್ಲ. ಆ ಬಳಿಕ ಕೆಲದಿನಗಳ ಹಿಂದೆ ಸೇತುವೆಯ ಮೇಲ್ಭಾಗದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಇಂದು ಬೆಳಗ್ಗೆ ಕುಸಿದು ಬಿದ್ದಿದೆ.

No Comments

Leave A Comment