Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ

ಬೆಳಗಾವಿ:ಡಿ 21 : ವಿಧಾನಪರಿಷತ್ ನೂತನ ಸಭಾಪತಿಯಾಗಿ, ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು.

ಆ ಮೂಲಕ, ಹೊರಟ್ಟಿ ಅವರು 3ನೇ ಬಾರಿಗೆ ಸಭಾಪತಿ ಹುದ್ದೆ ಅಲಂಕರಿಸಿದ್ದಾರೆ. ಇಂದು ಕಲಾಪ ಪ್ರಾರಂಭವಾಗುತ್ತಿದ್ದಂತೆ ಚುನಾವಣೆ ಪ್ರಕ್ರಿಯೆ ನಡೆದು ಅವರ ಅವಿರೋಧ ಆಯ್ಕೆಯನ್ನು ಹಂಗಾಮಿ ಸಭಾಪತಿ ಘೋಷಿಸಿದರು. ಬಾಗಲಕೋಟೆ ಮೂಲದವರಾದ 76 ವರ್ಷದ ಹೊರಟ್ಟಿ ಈ ಹಿಂದೆ ಜೆಡಿಎಸ್ ನಲ್ಲಿದ್ದು, ಇತ್ತೀಚೆಗೆ ಬಿಜೆಪಿ ಸೇರಿದ್ದರು.

ಕಾಂಗ್ರೆಸ್‌ ಹಾಗೂ ಜಾತ್ಯತೀತ ಜನತಾದಳದ ಸಮಿಶ್ರ ಸರಕಾರದಲ್ಲಿ ಸಚಿವ ಸ್ಥಾನವನ್ನು ಅಲಂಕರಿಸಿದ್ದರು. ಈ ಅವಧಿಯಲ್ಲಿ ವಿಜ್ಞಾನ-ತಂತ್ರಜ್ಞಾನ, ಸಣ್ಣ ಉಳಿತಾಯ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

No Comments

Leave A Comment