Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ....

ಟೈರ್‌ ಸ್ಪೋಟಗೊಂಡು ಕಾರೊಂದು ಮರಕ್ಕೆ ಡಿಕ್ಕಿ – ಮಗು ಸಾವು

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಂಗಲ ಗ್ರಾಮದ ಹೊರ ವಲಯದಲ್ಲಿ ಚಲಿಸುವ ವೇಳೆ ಕಾರಿನ ಟೈರ್‌ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮಗು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತದುರ್ದೈವಿ ತನ್ಮಯ್‌ ಎಂದು ತಿಳಿದು ಬಂದಿದ್ದು, ಕಾರಿನಲ್ಲಿ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು. ಚಲಿಸುವ ವೇಳೆ ಕಾರಿನ ಟೈರ್‌ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮಗು ತನ್ಮಯ್‌ ಮೃತಟ್ಟಿದ್ದು, ಮಂಜು, ಸಾಕಮ್ಮ, ಕಿರಣ್, ಚಂದ್ರಮ್ಮ, ಸಂತೆಯಮ್ಮ, ಚಾಲಕ ವೆಂಕಟೇಶ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹದೇಶ್ವರ ಬೆಟ್ಟದಲ್ಲಿ ಮಗುವಿನ ಹುಟ್ಟಿದ ಹಬ್ಬದ ಪ್ರಯುಕ್ತ ಪೂಜೆ ಸಲ್ಲಿಸಿ ವಾಪಸ್‌ ಆಗುವ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment