Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಭಾರತದೊಂದಿಗೆ ಕೆಲಸ ಮಾಡಲು ಚೀನಾ ಸಿದ್ಧ, ದ್ವಿಪಕ್ಷೀಯ ಸಂಬಂಧ ಬಲವರ್ಧನೆಗೆ ಒತ್ತು: ವಿದೇಶಾಂಗ ಸಚಿವ ವಾಂಗ್ ಯಿ

ಬೀಜಿಂಗ್: ಚೀನಾ-ಭಾರತ ನಡುವಿನ ಸಂಬಂಧಗಳ ಸ್ಥಿರ ಮತ್ತು ಬಲವಾದ ಅಭಿವೃದ್ಧಿಗಾಗಿ ನಾವು ಭಾರತದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ. ಇತ್ತೀಚೆಗಷ್ಟೇ ವಾಸ್ತವ ನಿಯಂತ್ರಣ ರೇಖೆಯಲ್ಲಿ ಎರಡೂ ದೇಶಗಳ ಯೋಧರ ಸಂಘರ್ಷದ ಬೆನ್ನಲ್ಲೇ ಚೀನಾ ನಾಯಕನ ಈ ಹೇಳಿಕೆ ಮುನ್ನೆಲೆಗೆ ಬಂದಿದೆ.

ತವಾಂಗ್ ಪ್ರದೇಶದಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ(ಎಲ್‌ಎಸಿ) ಭಾರತ ಮತ್ತು ಚೀನಾದ ಸೇನೆಗಳ ನಡುವೆ ಇತ್ತೀಚಿನ ಚಕಮಕಿ ಬಳಿಕ ಚೀನಾದ ವಿದೇಶಾಂಗ ಸಚಿವರ ಈ ಹೇಳಿಕೆ ನೀಡಿದ್ದಾರೆ. ದ್ವಿಪಕ್ಷೀಯ ಸಂಬಂಧಗಳ ಬಲವಾದ ಅಭಿವೃದ್ಧಿಗಾಗಿ ಭಾರತದೊಂದಿಗೆ ಕೆಲಸ ಮಾಡಲು ಚೀನಾ ಸಿದ್ಧವಾಗಿದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.

ಭಾರತದೊಂದಿಗಿನ ಚೀನಾದ ಸಂಬಂಧಗಳ ಕುರಿತು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ವಾಂಗ್, ‘ಚೀನಾ ಮತ್ತು ಭಾರತವು ರಾಜತಾಂತ್ರಿಕ ಮತ್ತು ಮಿಲಿಟರಿಯಿಂದ ಮಿಲಿಟರಿ ಮಾರ್ಗಗಳ ಮೂಲಕ ಸಂವಹನ ನಡೆಸಿದೆ. ಅಲ್ಲದೆ ಗಡಿ ಪ್ರದೇಶಗಳಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಎರಡೂ ದೇಶಗಳು ಬದ್ಧವಾಗಿವೆ ಎಂದು ಹೇಳಿದರು.

ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವೆ ಘರ್ಷಣೆ ನಡೆದಿತ್ತು. ಚಕಮಕಿಯ ಹಿನ್ನೆಲೆಯಲ್ಲಿ, ಭಾರತ ಮತ್ತು ಚೀನಾ 17ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯನ್ನು ಡಿಸೆಂಬರ್ 20ರಂದು ಚುಶುಲ್-ಮೊಲ್ಡೊ ಗಡಿ ಸಭೆಯ ಸ್ಥಳದಲ್ಲಿ ನಡೆಸಿವೆ. ಇಲ್ಲಿ ಭದ್ರತೆಯನ್ನು ಕಾಪಾಡಿಕೊಳ್ಳಲು ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆಯಲ್ಲಿ ತಿಳಿಸಿದೆ.

ಚೀನಾ-ಭಾರತೀಯ ಯೋಧರ ನಡುವಿನ ಘರ್ಷಣೆ ಕುರಿತಂತೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಈ ಹೇಳಿಕೆ ನೀಡಿದ್ದರು. ಯಾಂಗ್ಟ್ಸೆ ಪ್ರದೇಶದಲ್ಲಿ ಚೀನಾ ಸೈನಿಕರು ಒಂದೆಡೆ ಸೇಡು ತೀರಿಸಿಕೊಳ್ಳಲು ಯತ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ತಮ್ಮ ಸಂಕಲ್ಪ ಮತ್ತು ಶೌರ್ಯವನ್ನು ಪ್ರದರ್ಶಿಸಿ ಚೀನಾ ಸೇನೆಯನ್ನು ಹಿಮ್ಮೆಟ್ಟುವಂತೆ ಮಾಡಿತ್ತು ಎಂದು ಹೇಳಿದ್ದರು.

No Comments

Leave A Comment