Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಕರ್ನಾಟಕಕ್ಕೆ ಒಂದು ಇಂಚು ಭೂಮಿ ಬಿಟ್ಟು ಕೊಡುವುದಿಲ್ಲ: ಮಹಾ ಡಿಸಿಎಂ ಫಡ್ನವೀಸ್

ನಾಗ್ಪುರ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನಮ್ಮ ಸರ್ಕಾರ ಒಂದೇ ಒಂದು ಇಂಚು ಭೂಮಿ ಬಿಟ್ಟು ಕೊಡುವುದಿಲ್ಲ. ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ಹೇಳಿದ್ದಾರೆ.

ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವೀಸ್, ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಜನರಿಗೆ ನ್ಯಾಯ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಏನು ಬೇಕಾದರೂ ಮಾಡಲಿದೆ ಎಂದರು.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ವಿಷಯ ನಾಗ್ಪುರದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಪ್ರತಿಧ್ವನಿಸಿತು ಮತ್ತು ಪ್ರತಿಪಕ್ಷಗಳು ಈ ಸಂಬಂಧ ನಿರ್ಣಯ ಅಂಗೀಕರಿಸುವಂತೆ ಒತ್ತಾಯಿಸಿದವು.

ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್, ಮೊದಲ ವಾರದಲ್ಲಿ ನಿರ್ಣಯ ಮಂಡಿಸಲಾಗುವುದು ಎಂದು ವ್ಯವಹಾರ ಸಲಹಾ ಸಮಿತಿಯಲ್ಲಿ ನಿರ್ಧರಿಸಿದರೂ ಸರ್ಕಾರ ಗಡಿ ವಿವಾದದ ನಿರ್ಣಯವನ್ನು ಏಕೆ ಮಂಡಿಸಿಲ್ಲ ಎಂದು ಪ್ರಶ್ನಿಸಿದರು.

ವಿಶೇಷವೆಂದರೆ, ಕರ್ನಾಟಕ ವಿಧಾನಸಭೆಯು ಗುರುವಾರ ಮಹಾರಾಷ್ಟ್ರದೊಂದಿಗಿನ ಗಡಿರೇಖೆಯ ಕುರಿತು ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಿದೆ. ದಕ್ಷಿಣ ರಾಜ್ಯದ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ನೆರೆಯ ರಾಜ್ಯಕ್ಕೆ ಒಂದು ಇಂಚು ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಹೇಳಿದೆ.

ಮಹಾರಾಷ್ಟ್ರವು “ಸೃಷ್ಟಿಸಿದ” ಗಡಿ ವಿವಾದವನ್ನು ಖಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಂಡನಾ ನಿರ್ಣಯವನ್ನು ಮಂಡಿಸಿ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.

No Comments

Leave A Comment