Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ....

ಜಮ್ಮುವಿನಲ್ಲಿ ಎನ್ಕೌಂಟರ್: ನಾಲ್ವರು ಉಗ್ರರ ಸದೆಬಡಿದ ಸೇನಾಪಡೆ

ಜಮ್ಮು: ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಬುಧವಾರ ಎನ್ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆ  ಮಾಡಿದೆ ಎಂದು ತಿಳಿದುಬಂದಿದೆ.

ಎನ್ಕೌಂಟರ್ ಕುರಿತು ಮಾಹಿತಿ ನೀಡಿರುವ ಎಜಿಡಿಪಿ ಮುಕೇಶ್ ಸಿಂಗ್ ಅವರು, ಹೆದ್ದಾರಿಯಲ್ಲಿ ಲಾರಿಯ ಸಂಚಾರವೊಂದು ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಕೂಡಲೇ ಲಾರಿಯನ್ನು ಹಿಂಬಾಲಿಸಲಾಗಿತ್ತು. ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಲಾರಿ ನಿಂತಿತು. ಲಾರಿ ನಿಂತ ಕೂಡಲೇ ಚಾಲಕ ಪರಾರಿಯಾದ. ಲಾರಿಯನ್ನು ಪರಿಶೀಲಿಸಿದಾಗ ಉಗ್ರರು ಅಡಗಿ ಕುಳಿತಿರುವುದು ಕಂಡು ಬಂದಿತ್ತು. ಕೂಡಲೇ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು ಎಂದು ಹೇಳಿದ್ದಾರೆ.

ಉಗ್ರರ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳಿದ್ದವು. ಉಗ್ರರು ದಾಳಿ ನಡೆಸಲು ಆರಂಭಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಲಾಯಿತು. ಇದರಂತೆ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

No Comments

Leave A Comment