Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....

ಉಡುಪಿ: ಹೊಸ ವರ್ಷಾಚರಣೆಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ ಪ್ರಕಟ

ಉಡುಪಿ:ಡಿ 29. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳನ್ನು ಸೂಚಿಸಿ ಡಿಸೆಂಬರ್‌ 29ರ ಗುರುವಾರ ಪ್ರಕಟಣೆ ಹೊರಡಿಸಿದೆ.

ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ಕರ್ತವ್ಯಕ್ಕೆ ಹೆಚ್ಚುವರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡಿಸೆಂಬರ್ 31ರ ರಾತ್ರಿಯಿಂದ 2023ರ ಜನವರಿ 1ರ ಮಧ್ಯರಾತ್ರಿ 1 ಗಂಟೆ ವರೆಗೆ ಹೊಸ ವರ್ಷದ ಆಚರಣೆಯ ಸಮಯದಲ್ಲಿ, ಎಲ್ಲಾ ಸಂಘಟಕರು ಮತ್ತು ಸಾರ್ವಜನಿಕರಿಗೆ ಕೋವಿಡ್ 19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಸೂಚಿಸಲಾಗಿದೆ.

ಹೊಸ ವರ್ಷದ ಆಚರಣೆಗಳು ಜನವರಿ 1ರ ಮಧ್ಯರಾತ್ರಿ 1 ಗಂಟೆಯ ಮೊದಲು ಮುಕ್ತಾಯಗೊಳ್ಳಬೇಕು. ಪಬ್‌ಗಳು/ರೆಸ್ಟೋರೆಂಟ್‌ಗಳು/ಕ್ಲಬ್‌ಗಳು/ರೆಸಾರ್ಟ್‌ಗಳಲ್ಲಿ ಒಳಾಂಗಣ ಪ್ರದೇಶದ ಕಾರ್ಯಗಳನ್ನು ಅದರ ಸಾಮರ್ಥ್ಯದೊಳಗೆ ನಡೆಸಬೇಕು. ಅಗ್ನಿ ಅವಘಡಗಳ ಬಗ್ಗೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಖಚಿತಪಡಿಸಿಕೊಳ್ಳಬೇಕು. ಈವೆಂಟ್ ಆಯೋಜಕರು ಹೊಸ ವರ್ಷದ ಕಾರ್ಯಕ್ರಮದ ಸ್ಥಳಗಳಲ್ಲಿ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸ್ವಯಂ ಸೇವಕರು, ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು.

ಹೋಟೆಲ್, ಪಬ್‌ಗಳು, ರೆಸ್ಟೋರೆಂಟ್‌ಗಳು, ಹೋಮ್ ಸ್ಟೇಗಳು ಇತ್ಯಾದಿಗಳ ಸಂಘಟಕರು ತಮ್ಮ ಕಾರ್ಯ ಸ್ಥಳಗಳಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಬೇಕು. ಟ್ರಾಫಿಕ್ ಸಮಸ್ಯೆ ಮತ್ತು ಅಪಘಾತಗಳಿಗೆ ಕಾರಣವಾಗುವ ಯಾವುದೇ ವಾಹನಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ನಿಲ್ಲಿಸಬಾರದು. ಬಸ್ ನಿಲ್ದಾಣ, ರೈಲು ನಿಲ್ದಾಣ, ಬೀಚ್‌ಗಳು, ರಸ್ತೆಗಳು, ಫುಟ್‌ಪಾತ್ ಮತ್ತು ಉದ್ಯಾನದಲ್ಲಿ ಹೊಸ ವರ್ಷದ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಘಟಕರು ಅಥವಾ ಸಾರ್ವಜನಿಕರಿಗೆ ಅನುಮತಿಸಲಾಗುವುದಿಲ್ಲ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ಧ ಹಾಗೂ ಮದ್ಯದ ಅಮಲಿನಲ್ಲಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಬ್ದ ಮಾಲಿನ್ಯ ಉಂಟು ಮಾಡದೆ ಅದರ ಮಿತಿಯಲ್ಲಿ ಧ್ವನಿವರ್ಧಕಗಳನ್ನು ಬಳಸಬೇಕು. ನೆರೆಹೊರೆಯವರು ವಿಶೇಷವಾಗಿ ಆಸ್ಪತ್ರೆಯಲ್ಲಿ ದಾಖಲಾಗುವ ರೋಗಿಗಳು, ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಹಿರಿಯ ನಾಗರಿಕರು, ಹಾಸ್ಟೆಲ್‌ಗಳು, ಮನೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸಂಘಟಕರು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಮದ್ಯ ಸೇವಿಸಿ ವಾಹನ ಚಲಾಯಿಸುವ ಚಾಲಕರ ವಿರುದ್ಧ ಡ್ರಿಂಕ್ ಅಂಡ್ ಡ್ರೈವಿಂಗ್, ರಾಶ್ ಮತ್ತು ಅಲಕ್ಷ್ಯ ಪ್ರಕರಣಗಳನ್ನು ದಾಖಲಿಸಲಾಗುವುದು. ಹೋಟೆಲ್‌ಗಳು, ಪಬ್‌ಗಳು, ರೆಸ್ಟೋರೆಂಟ್‌ಗಳು, ಹೋಂಸ್ಟೇಗಳು ಇತ್ಯಾದಿಗಳ ಸಂಘಟಕರು ತಮ್ಮ ಸ್ಥಳಗಳಲ್ಲಿ ಹೊಸ ವರ್ಷದ ಕಾರ್ಯಕ್ರಮಗಳನ್ನು ನಡೆಸುವ ಮೊದಲು ಸ್ಥಳೀಯ ಪೊಲೀಸರಿಗೆ ತಿಳಿಸಬೇಕು ಎಂದು ಸೂಚಿಸಲಾಗಿದೆ.

No Comments

Leave A Comment