Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಭೀಕರ ರಸ್ತೆ ಅಪಘಾತದಲ್ಲಿ ಕ್ರಿಕೆಟರ್ ರಿಷಬ್ ಪಂತ್ ಗೆ ಗಾಯ, ಪರಿಸ್ಥಿತಿ ಗಂಭೀರ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು!

ನವದೆಹಲಿ: ಭಾರತ ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಅವರು ಕಾರು ಅಪಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೆಹಲಿ ಹಾಗೂ ಡೆಹ್ರಾಡೂನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಷಭ್‌ ಪಂತ್ ಅವರ ತಲೆ ಹಾಗೂ ಕಾಲುಗಳಿಗೆ ಗಾಯವಾಗಿದೆ. ಹಾಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ರಿಷಭ್‌ ಪಂತ್‌ ಅವರು ದೆಹಲಿಯಿಂದ ಉತ್ತರಾಖಂಡಕ್ಕೆ ಮರಳುತ್ತಿದ್ದ ವೇಳೆ ಹಮ್ಮಾದ್‌ಪುರ್‌ ಝಾಲ್‌ ಸಮೀಪ ಈ ದುರ್ಘಟನೆ ನಡೆದಿದೆ. ಅವರು ಮರ್ಸಿಡಿಸ್‌ ಕಾರು ಚಲಾಯಿಸುತ್ತಿದ್ದರು. ಕಾರು ವೇಗವಾಗಿದ್ದ ಕಾರಣ ನಿಯಂತ್ರಣಕ್ಕೆ ಸಿಗದೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ರಿಷಭ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ.

ಸದ್ಯ ರಿಷಬ್ ಪರಿಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ ಸುಶೀಲ್ ನಗರ್ ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು.

No Comments

Leave A Comment