Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಬೆಂಗಳೂರು: ಐಪಿಎಸ್ ಅಧಿಕಾರಿ ಆರ್. ದಿಲೀಪ್ ನಿಧನ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಡಿಐಜಿ, ಐಪಿಎಸ್ ಅಧಿಕಾರಿ ಆರ್. ದಿಲೀಪ್(53) ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ.

ಇತ್ತೀಚಿಗೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ದಿಲೀಪ್ ಅವರು ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಉಡುಪಿ,ಧಾರವಾಡ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು.ಇವರ ನಿಧನಕ್ಕೆ ಎಲ್ಲಾ ಹಿರಿಯ ಹಾಗೂ ಕಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕರಾವಳಿಕಿರಣ ಡಾಟ್ ಕಾ೦ ತೀವ್ರ ಸ೦ತಾಪವನ್ನು ಸೂಚಿಸಿದೆ.

No Comments

Leave A Comment