Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ, ಆಯೋಗದ ಅಂತಿಮ ವರದಿಯಿಂದ ಎಲ್ಲವೂ ಸ್ಪಷ್ಟವಾಗಲಿದೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ, ಹಿಂದುಳಿದ ಆಯೋಗದ ಅಂತಿಮ ವರದಿಯಿಂದ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ಸಲ್ಲಿಸಲಿದೆ. ಆಯೋಗದ ಅಂತಿಮ ವರದಿಯಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರದ ಉದ್ದೇಶ ಹೇಳಿದ್ದೇವೆ. ಅಂತಿಮ ವರದಿಯಲ್ಲಿ ಅಂಕಿ ಅಂಶಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧಪಟ್ಟವರ ಜತೆ ಚರ್ಚಿಸುತ್ತೇವೆ ಎಂದು ಹೇಳಿದರು.

ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕೆಲ ವರ್ಗದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಹಿನ್ನಡೆಯಾಗಿರುವುದು ನಿಜ. ಅವರಿಗೆ ನ್ಯಾಯ ಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಬೇಕಾದರೆ ಸ್ಪಷ್ಟೀಕರಣ ಕೊಡುತ್ತೇವೆ, ಯಾರಿಗೂ ಅನ್ಯಾಯ ಮಾಡಲ್ಲ. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿದ್ದಾಗ ಬೇಡಿಕೆ ಈಡೇರಿಸಲಿಲ್ಲ. ಈಗ ನಾವು ಜಾರಿ ಮಾಡುತ್ತಿರುವುದುರಿಂದ ಅವರಿಗೆ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಮಹಾದಾಯಿ ವಿಚಾರವಾಗಿ ಮಾತನಾಡಿ, ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಡಿಪಿಆರ್​ಗೆ ಒಪ್ಪಿಗೆ ನೀಡಿರುವ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ ಎಂದು ಹೇಳಿದರು.

ಮಹದಾಯಿಗಾಗಿ ನಾವು ಹೋರಾಟ ಮಾಡುದ್ದೆವು, ಅವರೂ ಮಾಡಿದ್ದರು. ಈಗ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ. 20-25 ವರ್ಷ ಹೋರಾಟಕ್ಕೆ ಫಲ ಸಿಕ್ಕಿದೆ. ಈ ವೇಳೆ ಲೋಪದೋಷ ಹುಡುಕುವುದು ಅವರ ಮನಸ್ಥಿತಿ ತೋರಿಸುತ್ತದೆ. ಕಾಂಗ್ರೆಸ್​ ನಾಯಕರ ಟೀಕೆ ಟಿಪ್ಪಣಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಎಂಒಎಫ್ ಕ್ಲಿಯರೆನ್ಸ್ ಬಳಿಕ ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತೇವೆ ಎಂದರು.

No Comments

Leave A Comment