Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಮಂಗಳೂರು: ತಣ್ಣೀರಬಾವಿ ಲಾಠಿ ಚಾರ್ಜ್ ಪ್ರಕರಣ – ಪೊಲೀಸ್ ಕಾನ್ಸ್‌ಟೇಬಲ್ ಸಸ್ಪೆಂಡ್

ಮಂಗಳೂರು:ಜ 03. ತಣ್ಣೀರಬಾವಿ ಬೀಚ್‌ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟಂತೆ ಸಿಬ್ಬಂದಿ ಸುನೀಲ್ ಅವರನ್ನು ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. ಘಟನೆ ಕುರಿತು ಯಾರಿಂದಲೂ ಪೋಷಕರು ಅಥವಾ ಬಾಲಕನಿಂದಾಗಲಿ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.

ಜ.1 ರಂದು ಘಟನೆ ನಡೆದಿದ್ದು, ವಿಕೇಂಡ್ ಮತ್ತು ಹೊಸ ವರ್ಷವಾದ್ದರಿಂದ ತಣ್ಣೀರಭಾವಿ ಬೀಚ್‌ಗೆ ಭೇಟಿ ನೀಡಿವವರ ಸಂಖ್ಯೆ ಹೆಚ್ಚಿದ್ದು, ಈ ವೇಳೆ ಅಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿಯ ವಿದ್ಯಾರ್ಥಿ, ಪಿಯು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದರು.

No Comments

Leave A Comment