Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ನಾರಾಯಣ ಗುರು ನಿಗಮ ಸ್ಥಾಪನೆಗೆ ಸುನಿಲ್ ಕುಮಾರ್ ನೇತೃತ್ವದಲ್ಲಿ ಸಿಎಂಗೆ ಮನವಿ

ಬೆಂಗಳೂರು:ಜ 05. ಇಂಧನ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನಾರಾಯಣ ಗುರು ನಿಗಮ ಸ್ಥಾಪನೆಗೆ ಕ್ರಮ ತೆಗದು ಕೊಳ್ಳುವಂತೆ ಮನವಿ ಸಲ್ಲಿಸಿದೆ.

ಬಿಲ್ಲವ ಸಮಾಜ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲೂ ಸಂಖ್ಯಾ ಬಾಹುಳ್ಯವನ್ನು ಹೊಂದಿದ್ದು, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮಾಜದ ಅಭಿವೃದ್ಧಿ ಹಾಗೂ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ದೃಷ್ಟಿಯಿಂದ ನಿಗಮ ಸ್ಥಾಪನೆ ಅಗತ್ಯ ಎಂದು ಮನವಿ ಮಾಡಲಾಗಿದೆ.

ಇನ್ನು ಬಿಲ್ಲವ, ಈಡಿಗ, ನಾಮಧಾರಿ ಎಂಬಿತ್ಯಾದಿ ಉಪನಾಮಗಳನ್ನು ಹೊಂದಿರುವ ಸಮಾಜದ ಎಲ್ಲ ವರ್ಗವನ್ನು ಒಂದೇ ವೇದಿಕೆಯ ಅಡಿಗೆ ತಂದು ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಹಕರಿಸಬೇಕೆಂದು ಸಮಾಜದ ನಿಯೋಗ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ರಘುಪತಿ ಭಟ್, ಹರತಾಳು ಹಾಲಪ್ಪ ಹಾಗೂ ಬಿಲ್ಲವ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

No Comments

Leave A Comment