Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮೊದಲ ಬಾರಿಗೆ ಅಮೇರಿಕಾದಲ್ಲಿ ಜಡ್ಜ್ ಆಗಿ ಭಾರತೀಯ ಮೂಲದ ಸಿಖ್ ಮಹಿಳೆ ಆಯ್ಕೆ!

ಟೆಕ್ಸಾಸ್: ಜ 09. ಭಾರತೀಯ ಮೂಲದ ಸಿಖ್ ಮಹಿಳೆಯೊಬ್ಬರು ಅಮೆರಿಕದಲ್ಲಿ ನ್ಯಾಯಾಧೀಶರ ಹುದ್ದೆಗೇರಿದ್ದಾರೆ. ಅಮೆರಿಕದಲ್ಲಿ ನ್ಯಾಯಾಧೀಶ ಹುದ್ದೆಗೇರಿದ ಮೊದಲ ಸಿಖ್ ಮಹಿಳಾ ನ್ಯಾಯಾಧೀಶೆ ಎಂಬ ಹಿರಿಮೆಗೆ ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ಪಾತ್ರರಾಗಿದ್ದಾರೆ.

ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ ಹುಟ್ಟಿ ಬೆಳೆದರು. ಈಗ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಳ್ಳೈರ್‌ನಲ್ಲಿ ವಾಸಿಸುತ್ತಿದ್ದಾರೆ .ಅಟಾರ್ನಿಯಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ಹಲವರು ನಾಗರಿಕ ಹಕ್ಕುಗಳ ಸಂಘಟನೆಗಳ ಜೊತೆ ಕೆಲಸ ಮಾಡಿದ್ದಾರೆ.

ಹ್ಯಾರಿಸ್ ಕೌಂಟಿಯ ಸಿವಿಲ್ ಕೋರ್ಡ್ ನ್ಯಾಯಾಧೀಶರಾಗಿ ನೇಮಕವಾಗಿದ್ದೇನೆ ಎಂದು ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ನಿಜಕ್ಕೂ ಗೌರವದ ವಿಚಾರ ಎಂದ ಅವರು ಬರೆದುಕೊಂಡಿದ್ದಾರೆ.

ಯುಎಸ್ ನಲ್ಲಿ ಅಂದಾಜು 5 ಲಕ್ಷ ಸಿಖ್ಖರಿದ್ದಾರೆ. ಅದರಲ್ಲಿ 20 ಸಾವಿರ ಮಂದಿ ಹೂಸ್ಟನ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.

No Comments

Leave A Comment