Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ಚಂದಾ ಕೊಚ್ಚರ್‌ ದಂಪತಿ ಬಿಡುಗಡೆಗೆ ಆದೇಶ

ಮುಂಬೈ:ಜ.9 .ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಐಸಿಐಸಿ ಬ್ಯಾಂಕ್​​ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್​ ಅವರನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.

ಇಬ್ಬರನ್ನೂ ಸಿಬಿಐ ಅಧಿಕಾರಿಗಳು 2022ರ ಡಿಸೆಂಬರ್ 23ರಂದು ಬಂಧಿಸಿದ್ದರು. ಬಂಧನವು ಕಾನೂನಿನ ಪ್ರಕಾರವಾಗಿಲ್ಲ. ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 41ಎ ಅನ್ನು ಉಲ್ಲಂಘಿಸಲಾಗಿದೆ. ಸಂಬಂಧ ಪಟ್ಟ ವ್ಯಕ್ತಿಗೆ ಮೊದಲು ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗಲು ಹೇಳಬೇಕು ಎಂದು ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ಮತ್ತು ಪಿಕೆ ಚವಾಣ್ ಅವರ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ನಿರ್ದೇಶಕಿ ಚಂದಾ ಕೊಚ್ಚರ್‌, ದೀಪಕ್‌ ಕೊಚ್ಚರ್‌ ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪವಿದೆ. ವಿಡಿಯೊಕಾನ್ ಗ್ರೂಪ್, ಐಸಿಐಸಿಐ ಬ್ಯಾಂಕ್‌ನಿಂದ ₹ 3,250 ಕೋಟಿ ಸಾಲ ಪಡೆದ ಕೆಲ ತಿಂಗಳ ನಂತರ ವಿಡಿಯೊಕಾನ್ ಪ್ರವರ್ತಕ ವೇಣುಗೋಪಾಲ್, ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದರು. ಆರೋಪಿಯು(ಚಂದಾ ಕೊಚ್ಚರ್) ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ಖಾಸಗಿ ಕಂಪನಿಗೆ ಸಾಲವನ್ನು ಮಂಜೂರು ಮಾಡಿದ್ದಾರೆ ಎಂಬುದು ಸಿಬಿಐ ಆರೋಪವಾಗಿದೆ.

No Comments

Leave A Comment