Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಭೀಕರ ಚಳಿಗೆ ಉತ್ತರ ಭಾರತ ತತ್ತರ: ರೈಲು, ವಿಮಾನ ಹಾರಾಟದಲ್ಲಿ ವ್ಯತ್ಯಯ, ದೆಹಲಿಯಲ್ಲಿ ಜ.15ರವರೆಗೆ ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ: ಕಳೆದ 15 ದಿನಗಳಿಂದ ಭೀಕರ ಚಳಿಗೆ ಉತ್ತರ ಭಾರತ ತತ್ತರಗೊಂಡಿದ್ದು, ಭಾರಿ ಚಳಿ ಹಾಗೂ ಮಂಜು ಮುಸುಕಿದ ವಾತಾವರಣವು ಸದ್ದಿಲ್ಲದೆ ನೂರಾರು ಜನರನ್ನು ಬಲಿಪಡೆದುಕೊಂಡಿದೆ. ಮಂಜು ಮುಸುಕಿದ ವಾತಾವರಣ ಹಿನ್ನೆಲೆಯಲ್ಲಿ ಹಲವೆಡೆ ರೈಲು ಸಂಚಾರ ಹಾಗೂ ವಿಮಾನಗಳ ಹಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದಿದೆ. ಚಳಿಯ ತೀವ್ರವಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರ, ದೆಹಲಿ, ಪಂಬಾಜ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಉಷ್ಣಾಂಶಷ ಭಾರೀ ಕುಸಿದಿದ್ದು, ಸಾಮಾನ್ಯ ಜನಜೀವನದ ಮೇಲೆ ವ್ಯತ್ಯಯ ಬೀರಿದೆ.

ಮಂಜು ಮುಸುಕಿದ ವಾತಾವರಣವಿರುವುದರಿಂದ ಗೋಚರತೆ ಪ್ರಮಾಣ ಭಾರೀ ಇಳಿಕೆಯಾಗಿದ್ದು.  ಉತ್ತಪ್ರದೇಶದ ಆಗ್ರಾ, ಪಂಜಾಬ್’ನ ಭಠಿಂಡಾದಲ್ಲಿ ಗೋಚರತೆಯು ಶೂನ್ಯಕ್ಕೆ ತಲುಪಿದೆ. ಪರಿಣಾಮ ಭಾನುವಾರ 480ಕ್ಕೂ ಹೆಚ್ಚು ರೈಲುಗಳ ಓಡಾಟದಲ್ಲಿ ಏರುಪೇರಾಗಿದೆ. ಜೊತೆಗೆ 25 ವಿಮಾನಗಳ ಹಾರಾಟದಲ್ಲೂ ವ್ಯತ್ಯಯಗಳು ಕಂಡು ಬಂದಿವೆ.

ಚಳಿಗೆ ಕಾನ್ಪುರ ವೊಂದರಲ್ಲೇ 98 ಮಂದಿ ಸಾವು
ಈ ನಡುವೆ ಭೀಕರ ಚಳಿ ಉತ್ತರಪ್ರದೇಶದ ಕಾನ್ಪುರ ಒಂದರಲ್ಲಿಯೇ 98 ಮೇದಿಯನ್ನು ಬಲಿ ಪಡೆದುಕೊಂಡಿದೆ ಎಂದು ವರದಿಗಳಿಂತ ತಿಳಿದುಬಂದಿದೆ.

ನಗರದ  ಎಲ್’ಪಿಎಸ್ ಇನ್ ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ನೀಡಿರುವ ವರದಿ ಅನ್ವಯ ಕಳೆದೊಂದು ವಾರದಲ್ಲೇ ನಗರದಲ್ಲಿ 98 ಜನರು ಹೃದಯಾಘಾತ ಮತ್ತು ಮೆದುಳಿನ ಸಮಸ್ಯೆಯಿಂದಾಗಿ ಸಾವನ್ನಪ್ಪಿದ್ದಾರೆಂದು ಹೇಳಿದೆ.

ಕಾನ್ಪುರದ ಲಕ್ಷ್ಮೀಪತ್ ಸಿಂಘಾನಿಯಾ ಇನ್ ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆ ನೀಡಿರುವ ಮಾಹಿತಿ ಪ್ರಕಾರ ಗುರುವಾರ ಒಂದೇ ದಿನ 723 ರೋಗಿಗಳು ಹೃದಯ ಸಂಬಂಧಿ ಸಮಸ್ಯೆ ವಿಷಯದಲ್ಲಿ ತುರ್ತು ಮತ್ತು ಹೊರರೋಗಿಗಳ ವಿಭಾಗಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿಸಿದೆ.

ನಗರದಲ್ಲಿ ಕಳೆದ 15 ದಿನಗಳಿಂದ  ಕನಿಷ್ಠ ಉಷ್ಣಾಂಶ 4ರಿಂದ 6 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ತೀವ್ರ ಚಳಿಯಿಂದಾಗಿ ರಕ್ತದೊತ್ತಡದಲ್ಲಿ ಏರುಪೇರಾಗಿ, ರಕ್ತ ಹೆಪ್ಪುಗಟ್ಟಿ ಮಿದುಳು ಹಾಗೂ ಹೃದಯಾಘಾತ ಸಂಭವಿಸುತ್ತಿದೆ. ಚಳಿಯಿಂದಾಗಿ ಕೇವಲ ವೃದ್ದರಷ್ಟೇ ಅಲ್ಲದೆ, ಮಧ್ಯವಯಸ್ಕರಿಗೂ ಹೃದಯ, ಮಿದುಳು ಆಘಾತ ಸಂಭವಿಸಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಜನವರಿ 15ರವರೆಗೆ ದೆಹಲಿಯಲ್ಲಿ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ

ಘೋಷಿಸಲಾಗಿದೆ. ಈ ಬಗ್ಗೆ ದೆಹಲಿ ಸರ್ಕಾರದ ಸೂಚನೆಯಂತೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.

9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ. ರಜೆ ಇದ್ದರೂ ಶೈಕ್ಷಣಿಕ ಕಾರ್ಯಕ್ಷಮತೆ ಬಗ್ಗೆ ಗಮನಹರಿಸಲಾಗುವುದು ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯ ತಿಳಿಸಿದೆ.

ಇಂದು ಬೆಳಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ಜನ ತೀವ್ರ ಚಳಿಯಿಂದ ತತ್ತರಿಸಿ ಹೋಗಿದ್ದು, ಯಾರು ಮನೆಯಿಂದ ಹೊರಬರುತ್ತಿಲ್ಲ. ಪ್ರತಿಕೂಲ ಹವಾಮಾನ ಮತ್ತು ಇತರ ಕಾರ್ಯಾಚರಣೆಯ ಸಮಸ್ಯೆಗಳಿಂದಾಗಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 20 ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿತ್ತು,

ಅಲ್ಲದೇ, ಮಂಜು ಕವಿದ ವಾತಾವರಣದಿಂದಾಗಿ 42 ರೈಲುಗಳು ಸಂಚಾರದಲ್ಲೂ ವ್ಯತ್ಯಯವಾಗಿದೆ ಎಂದು ಉತ್ತರ ರೈಲ್ವೆ ವಕ್ತಾರರು ತಿಳಿಸಿದ್ದಾರೆ.

ಚಳಿ ಹೆಚ್ಚಾಗುತ್ತಲೆ ಇದ್ದು, ಇನ್ನು ಎರಡು ದಿನಗಳವರೆಗೆ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಇರುವುದರಿಂದ ಜನ ಎಚ್ಚರವಹಿಸಬೇಕು ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

No Comments

Leave A Comment