Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ವಿಧಾನಸಭಾ ಚುನಾವಣೆಗೆ ಬಿರುಸುಕೊಂಡ ಪ್ರಚಾರಾಂದೋಲನ: ಬೆಳಗಾವಿಯಲ್ಲಿ ‘ಪ್ರಜಾಧ್ವನಿ’ ಜಂಟಿ ಯಾತ್ರೆ ಆರಂಭಿಸಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಧಿಕೃತ ಪ್ರಚಾರಾಂದೋಲನಕ್ಕೆ ಬುಧವಾರ ಅಧಿಕೃತ ಚಾಲನೆ ನೀಡಿರುವ ರಾಜ್ಯ ಕಾಂಗ್ರೆಸ್ ಪಕ್ಷವು, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ತಂಗಿದ್ದ ಬೆಳಗಾವಿಯ ಗಾಂಧಿಭಾವಿಯಲ್ಲಿ ಪ್ರಜಾಧ್ವನಿ ಜಂಟಿ ಯಾತ್ರೆಗೆ ಬುಧವಾರ ಚಾಲನೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ‘ಪ್ರಜಾ ಧ್ವನಿ’ ಬಸ್ ಯಾತ್ರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಬೆಳಗಾವಿಯ ವೀರಸೌಧದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್. ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಈ ಜಂಟಿ ರಥಯಾತ್ರೆಯಲ್ಲಿ ಬರೋಬ್ಬರಿ 20 ಜಿಲ್ಲೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು 10 ದಿನಗಳ ಕಾಲ ಜಂಟಿಯಾಗಿ ಸರ್ಕಾರದ ವಿರುದ್ಧ ವಾಕ್ಸಮರ ನಡೆಸಲಿದ್ದಾರೆ.

ಜನವರಿ 11ರಿಂದ 28ರವರೆಗೂ 20 ಜಿಲ್ಲೆಗಳಲ್ಲಿ ಈ ಉಭಯ ನಾಯಕರು ಒಟ್ಟಿಗೇ ಬಸ್ ಯಾತ್ರೆಯಲ್ಲಿ ಸಾಗಲಿದ್ದಾರೆ. ಜೊತೆಗೆ ಬಿಜೆಪಿ ಪಾಪದ ಪತ್ರ ಹಾಗೂ ಬಿಜೆಪಿ ಪಾಪದ ಪುರಾಣ ಎಂದು ಅಭಿಯಾನ ಆರಂಭಿಸಿದ್ದು, ಜನರ ಹೃದಯ ಗೆಲ್ಲಲು ಮುಂದಾಗಿದ್ದಾರೆ.

No Comments

Leave A Comment