Log In
BREAKING NEWS >
ಜನವರಿ 29ರಿ೦ದ 31ರವರೆಗೆ ಅಮ್ಮು೦ಜೆ ಶ್ರೀದಾಮೋದರ ದೇವಸ್ಥಾನದ ಪ್ರತಿಪ್ರತಿಷ್ಠಾ ದಶಮನೋತ್ಸವ ಕಾರ್ಯಕ್ರಮದ ಸ೦ಭ್ರಮವು ಜರಗಲಿದೆ-30ರ ಸೋಮವಾರದ೦ದು ಶ್ರೀದಾಮೋದರ ದೇವರಿಗೆ ಚಿನ್ನದ ಕವಚ ಸಮರ್ಪಣಾ ಕಾರ್ಯಕ್ರಮವು ಜರಗಲಿದೆ....

ಕೊನೆಗೂ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

ಬೆಂಗಳೂರು: ದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರೋಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೊನೆಗೂ ಅವಕಾಶ ನೀಡಲಾಗಿದೆ.

ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ಸಾಲುಮರದ ತಿಮ್ಮಕ್ಕ ಮತ್ತು  ತುಳಸಿಗೌಡ ಹಾಲಕ್ಕಿ ಅವರ ಸಾಧನೆಗಳನ್ನು ಬಿಂಬಿಸುವ ಕರ್ನಾಟಕದ ‘ನಾರಿ ಶಕ್ತಿ ವಿಷಯದ ಸ್ತಬ್ಧ ಚಿತ್ರವನ್ನು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರ ಕೈ ಬಿಟ್ಟಿತ್ತು. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ರಾಜ್ಯಾದ್ಯಂತ ತೀವ್ರ ಜನಾಕ್ರೋಶ ವ್ಯಕ್ತವಾಗಿತ್ತು.

ಈ ಸಂಬಂಧ ನಡೆದ ನಾಲ್ಕು ಸಭೆಗಳಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಸಂಬಂಧ ಒಪ್ಪಿಗೆ ಸೂಚಿಸಿದ ಕೇಂದ್ರ ಸರ್ಕಾರ, ಐದನೇ ಸಭೆಯಲ್ಲಿ ಕರ್ನಾಟಕವನ್ನು ಕೈಬಿಟ್ಟಿತ್ತು.  ಇತರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಕರ್ನಾಟಕವನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು.

ಇದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ನಡುವೆ ಕೊನೆ ಕ್ಷಣ ಕ್ಷಣದಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡಲಾಗಿದೆ.

No Comments

Leave A Comment