Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ....

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಯುವಕನ ಶವ ಪತ್ತೆ – ಸಾವಿನ ಬಗ್ಗೆ ಶಂಕೆ

ಬಂಟ್ವಾಳ:ಜ.12: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ ರಾಜೇಶ್‌ ಪೂಜಾರಿ ಸ್ಥಾನದ ಮನೆ ಮೃತರಾಗಿದ್ದು, ಅವರ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ. ನ್ಆದರೆ ಮೃತದೇಹ ಪತ್ತೆಯಾದ ಬಳಿಕ ಸಾರ್ವಜನಿಕ ರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ.

ಇನ್ನು ರಾಜೇಶ್ ಅವರು ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.

ದ್ವಿಚಕ್ರ ವಾಹನ ಅಪಘಾತವಾದ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ. ಅಥವಾ ಇನ್ನಾವುದೋ ಕಾರಣವಿರಬಹುದಾ ? ಎಂಬ ಬಗ್ಗೆಯೂ ಪೋಲೀಸರು ತನಿಖೆಗೆ ಮುಂದಾಗಿದ್ದಾರೆ.

No Comments

Leave A Comment