Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಜ.15ಕ್ಕೆ ಉಡುಪಿ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಸಮಾರ೦ಭ

ಉಡುಪಿ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇದೇ ಬರುವ ಆದಿತ್ಯವಾರ ತಾ. 15.01.2023ರಂದು ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಬೆಳಿಗ್ಗೆ 10.00 ಗಂಟೆಗೆ ಉಡುಪಿ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಲಿರುವುದು.

ಈ ಸಮಾರಂಭದಲ್ಲಿ ನಮ್ಮ ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾದ ಮಿಥುನ್ ರೈ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಭುಜಂಗ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ದಿನಕರ್ ಹೇರೂರು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಮಿತಿಯ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೋಶ್ನಿ ಓಲಿವರ್, ನಾಗೇಶ್ ಉದ್ಯಾವರ ಈ ಎಲ್ಲಾ ನಾಯಕರುಗಳು ಭಾಗವಹಿಸಲಿದ್ದು ನಮ್ಮ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಕಾರ್ಯದಲ್ಲಿ ನಾವೆಲ್ಲರೂ ಭಾಗಿಯಾಗಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಂಘಟಿತರಾಗಬೇಕಾಗಿದ್ದು ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಉಡುಪಿ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.

No Comments

Leave A Comment