Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ಶೀಜನ್ ಖಾನ್‌ಗೆ ಜಾಮೀನು ನಿರಾಕರಿಸಿದ ಕೋರ್ಟ್

ಮುಂಬೈ: ಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಜಾಮೀನು ಅರ್ಜಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ 28 ವರ್ಷದ ಶೀಜನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಡಿ.ದೇಶಪಾಂಡೆ ಅವರು, ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.

ವಕೀಲರಾದ ಶೈಲೇಂದ್ರ ಮಿಶ್ರಾ ಮತ್ತು ಶರದ್ ರೈ ಅವರು ಆರೋಪಿ ಶೀಜನ್ ಖಾನ್ ಪರವಾಗಿ ವಾದಿಸಿದರು.

ತುನಿಶಾ ಕುಟುಂಬವನ್ನು ಪ್ರತಿನಿಧಿಸಿದ್ದ ವಕೀಲ ತರುಣ್ ಶರ್ಮಾ ಅವರು ನಟನಿಗೆ ಜಾಮೀನು ನೀಡುವುದನ್ನು ವಿರೋಧ ವ್ಯಕ್ತಪಡಿಸಿದರು ಮತ್ತು ಈ ವಿಷಯದಲ್ಲಿ ಖಾನ್ ಅವರ ತಾಯಿ ಕೂಡ ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

No Comments

Leave A Comment