Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ....

ಹಾವೇರಿ: ಸಿಎಂ ಬೊಮ್ಮಾಯಿ ನಿವಾಸದ ಎದುರು ಪಂಚಮಸಾಲಿಗರ ಪ್ರತಿಭಟನೆ

ಹಾವೇರಿ: ಮೀಸಲಾತಿಯಲ್ಲಿ ಸ್ಪಷ್ಟತೆಯ ಕೊರತೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಎದುರು ಪಂಚಮಸಾಲಿ ಸಮುದಾಯದವರು ಇಂದು ಪ್ರತಿಭಟನೆ ನಡೆಸಿದರು.

ಪಂಚಮಸಾಲಿ ಲಿಂಗಾಯಿತ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಮುದಾಯದ ನೂರಾರು ಮಂದಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಜಯ ಮೃತ್ಯುಂಜಯ ಸ್ವಾಮೀಜಿ, ಡಿಸೆಂಬರ್ 29 ರಂದು ತಮ್ಮ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಾಯಿ ಮೇಲೆ ಆಣೆ ಮಾಡಿದ್ದರು. ನಾವು 2 ಎ ಮೀಸಲಾತಿ ಕೇಳಿದ್ದೇವು. ಆದರೆ, ಅವರು 2 ಡಿ ನೀಡಿದ್ದಾರೆ. ಸಿಎಂ ಅವರ ತಾಯಿ ಮೇಲೆ ಆಣೆ ಮಾಡಿ ತಪ್ಪು ಮಾಡಿದ್ದಾರೆ. ಆದ್ದರಿಂದ ಅವರ ನಿವಾಸದ ಎದುರು ಒಂದು ದಿನದ ಸತ್ಯಾಗ್ರಹ ನಡೆಸುತ್ತಿರುವುದಾಗಿ ತಿಳಿಸಿದರು.

No Comments

Leave A Comment