Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ, 72 ಮಂದಿ ಎಲ್ಲರೂ ಸಜೀವ ದಹನ: ಯೇತಿ ವಿಮಾನಯಾನ ಸಂಸ್ಥೆ

ಕಾಠ್ಮಂಡು: 72 ಜನರಿದ್ದ ವಿಮಾನ ಭಾನುವಾರ ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡಿದೆ ಎಂದು ಯೇತಿ ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದೆ. 72 ಮಂದಿ ಸಾವಿಗೀಡಾಗಿದ್ದಾರೆ ಅಥವಾ ಬದುಕುಳಿದಿದ್ದಾರೆ ಎಂಬ ಬಗ್ಗೆ ನಮಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ ಎಂದು ಸುದರ್ಶನ್ ಬರ್ತೌಲಾ ಸುದ್ದಿಸಂಸ್ಥೆ ಎಎಫ್‌ಪಿಗೆ ತಿಳಿಸಿದರು.

ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ (CAAN) ಪ್ರಕಾರ, ಯೇತಿ ಏರ್‌ಲೈನ್ಸ್‌ನ 9N-ANC ATR-72 ವಿಮಾನವು ಕಠ್ಮಂಡುವಿನಿಂದ ಬೆಳಿಗ್ಗೆ 10.33ಕ್ಕೆ ಹೊರಟಿತ್ತು. ಬಳಿಕ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ, ಹಳೆಯ ವಿಮಾನ ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣದ ನಡುವಿನ ಸೇಟಿ ನದಿಯ ದಡದಲ್ಲಿ ಪತನಗೊಂಡಿದೆ.

ವಿಮಾನ ಅವಶೇಷಗಳು ಬೆಂಕಿಗಾಹುತಿಯಾಗಿದ್ದು, ರಕ್ಷಣಾ ತಂಡ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಥಳೀಯ ಅಧಿಕಾರಿ ಗುರುದತ್ತ ಧಾಕಲ್ ತಿಳಿಸಿದ್ದಾರೆ.

ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ತಲುಪಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಎಲ್ಲಾ ರಕ್ಷಣಾ ತಂಡಗಳು ಮೊದಲು ಬೆಂಕಿಯನ್ನು ನಂದಿಸಲು ಮತ್ತು ಪ್ರಯಾಣಿಕರನ್ನು ರಕ್ಷಿಸಲು ಗಮನಹರಿಸಿವೆ ಎಂದು ಧಾಕಲ್ ಹೇಳಿದರು.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಅಪಘಾತದ ವಿವರಗಳು ಇನ್ನಷ್ಟೇ ಬರಬೇಕಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಲಾದ ಚಿತ್ರಗಳು ಮತ್ತು ವಿಡಿಯೋಗಳಲ್ಲಿ ಪತನದಿಂದಾಗಿ ಏಳುತ್ತಿರುವ ಹೊಗೆಯನ್ನು ತೋರಿಸಿದೆ.

No Comments

Leave A Comment