Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಸಿಕಂದರಾಬಾದ್ – ವಿಶಾಖಪಟ್ಟಣ: ʻವಂದೇ ಭಾರತ್ ʼ ರೈಲಿಗೆ ಪ್ರಧಾನಿ ಚಾಲನೆ

ಹೈದರಬಾದ್:ಜ 15 : ತೆಲಂಗಾಣದ ಸಿಕಂದರಾಬಾದ್ ಮತ್ತು ಆಂಧ್ರಪ್ರದೇಶದ ವಿಶಾಖಪಟ್ಟಣ ನಡುವೆ ಸಂಪರ್ಕಿಸುವ ವಂದೇ ಭಾರತ್ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು.

‘ವಂದೇ ಭಾರತ್‌, ದೇಶದ ನಿಜವಾದ ಪ್ರತಿರೂಪವಾಗಿದೆ. ಅವಲಂಬನೆಯ ಮನಸ್ಥಿತಿಯಿಂದ ಹೊರಬಂದು ಸ್ವಾವಲಂಬನೆ ಕಡೆಗೆ ಚಲಿಸುತ್ತಿರುವುದರ ಸಂಕೇತವಾಗಿದೆಇದು ತೆಲಂಗಾಣ ಮತ್ತು ಆಂಧ್ರಪ್ರದೇಶದ ಜನರಿಗೆ ಉಡುಗೊರೆಯಾಗಿದೆ’ ಎಂದು ಪ್ರಧಾನಿ ಹೇಳಿದರು.

ಎರಡು ತೆಲುಗು ರಾಜ್ಯಗಳ ನಡುವೆ ಕಾರ್ಯನಿರ್ವಹಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇದಾಗಿದ್ದು, ಸಿಕಂದರಾಬಾದ್‌ನಿಂದ ವಿಶಾಖಪಟ್ಟಣವನ್ನು ಎಂಟು ಗಂಟೆ 30 ನಿಮಿಷಗಳಲ್ಲಿ ತಲುಪುತ್ತದೆ.

No Comments

Leave A Comment