Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪ್ರೀತಿಸಿ ವಂಚನೆ: ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣು; ಆರೋಪಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಪೊಲೀಸರು ಹಿಂದೇಟು?

ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರೇಮಿಸಿದ ಯುವಕ ವಂಚಿಸಿದ ಹಿನ್ನೆಲೆಯಲ್ಲಿ ಮುಗ್ಧ ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.

ಸಾವನ್ನಪ್ಪಿದ ತರುಣಿಯನ್ನು ದೀಪ್ತಿ(17) ಎಂದು ಗುರುತಿಸಲಾಗಿದೆ. ಹಿತೇಶ್ (25) ಎಂಬ ತರುಣ ಈಕೆಯನ್ನು ಪ್ರೀತಿಸುತ್ತಿದ್ದ. ನಂತರ ಆತನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿ ಹಿತೇಶ್ ಬಿಜೆಪಿ ಕಾರ್ಯಕರ್ತ ಎಂದು ತಿಳಿದು ಬಂದಿದೆ.

ನೊಂದ ಬಾಲಕಿ ಜ.10ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿದ್ದಳು. ತೀವ್ರ ಅಸ್ವಸ್ಥಗೊಂಡ ಆಕೆಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ದೀಪ್ತಿ ಸಾವನ್ನಪ್ಪಿದ್ದಾಳೆ. ಸಾಯುವ ಕೊನೆಯ ಕ್ಷಣದಲ್ಲಿ ಡೆತ್ ನೋಟ್ ಬಾಲಕಿ ಬರೆದಿದ್ದಾಳೆ.

ಆರೋಪಿ ಹಿತೇಶ್ ವಿರುದ್ಧ ದೂರು ದಾಖಲಿಸದೇ ಕುದುರೆ ಮುಖ ಪೊಲೀಸರು ಸತಾಯಿಸಿದ್ದರು. ನಂತರ ಪೋಷಕರ ದೂರು ಸ್ವೀಕರಿಸದ ಕುದುರೆಮುಖ ಪೊಲೀಸರಿಗೆ ಎಸ್ಪಿ ತರಾಟೆಗೆ ತೆಗೆದುಕೊಂಡಿದ್ದರು.

ಎಸ್.ಪಿ ಸೂಚನೆ ಬಳಿಕ ಆರೋಪಿ ಹಿತೇಶ್ ವಿರುದ್ಧ ದೂರು ಸ್ವೀಕಾರ ಮಾಡಲಾಗಿದೆ.ಆದರೆ ಈವರೆಗೆ ಆರೋಪಿಯನ್ನು ಕುದುರೆಮುಖ ಪೊಲೀಸರು ಬಂಧಿಸಿಲ್ಲ. ಪೊಲೀಸರ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪಿ ಬಿಜೆಪಿ ಕಾರ್ಯಕರ್ತ ಹಿತೇಶ್ ವಿರುದ್ಧ ಕ್ರಮಕ್ಕೆ ಹಿಂದೇಟು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

No Comments

Leave A Comment