Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ: ಟ್ರಕ್-ಕಾರು ಮುಖಾಮುಖಿ ಡಿಕ್ಕಿ, 9 ಮಂದಿ ದುರ್ಮರಣ

ಮುಂಬೈ: ಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು, ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿದ್ದವರು ಕಾರಿನಲ್ಲಿ ಗೋವಾಕ್ಕೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ದುರ್ಘಟನೆಯಲ್ಲಿ 4 ವರ್ಷದ ಮಗು ಪವಾಡಸದೃಢ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ. ಮಗುವಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಟ್ರಕ್ ಮುಂಬೈಗೆ ತೆರಳುತ್ತಿದ್ದಾಗ, ಕಾರು ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ತೆರಳುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರಲ್ಲಿ ಐವರು ಪುರುಷರು, ಒಂಜು ಮಗು ಹಾಗೂ ಮೂವರು ಮಹಿಳೆಯರು ಸೇರಿದ್ದಾರೆ. ಹೆದ್ದಾರಿಯಲ್ಲಿ ಸಂಚಾರ ಪುನರಾರಂಭಗೊಂಡಿದ್ದು, ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

No Comments

Leave A Comment