Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಶೂಟಿಂಗ್ ವೇಳೆ ತಮಿಳು ನಟ ವಿಜಯ್ ಆಂಟನಿಗೆ ಗಾಯ: ಪರಿಸ್ಥಿತಿ ಗಂಭೀರ, ಮಲೇಷ್ಯಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

ಮಲೇಷ್ಯಾದಲ್ಲಿ ನಡೆಯುತ್ತಿದ್ದ ಸಿನಿಮಾ ಶೂಟಿಂಗ್‌ ವೇಳೆ ಅವಘಡ ಸಂಭವಿಸಿದ್ದು, ತಮಿಳು ನಟ ವಿಜಯ್ ಆಂಟನಿ ಅವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಮಲೇಷ್ಯಾದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಿಜಯ್ ಆರೋಗ್ಯ ಸ್ಥಿತಿ ಚಿಂತಾಜನಕ ಎಂದು ಹೇಳಲಾಗುತ್ತಿದೆ. ಮಲೇಷ್ಯಾದಲ್ಲಿ ವಿಜಯ್ ನಟನೆಯ ‘ಪಿಚ್ಚೈಕಾರನ್ 2’ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ದೋಣಿಯೊಂದರಲ್ಲಿ ನಡೆಯುತ್ತಿದ್ದ ಸಾಹಸ ಸನ್ನಿವೇಶದ ದೃಶ್ಯದಲ್ಲಿ ದೋಣಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದ ರಭಸಕ್ಕೆ ವಿಜಯ್ ಅವರ ಹಲ್ಲು ಮತ್ತು ದವಡೆಗೆ ತೀವ್ರತರಹದ ಪೆಟ್ಟು ಬಿದ್ದಿದೆ. ಮೂಳೆಗಳು ಮುರಿದಿವೆ ಎಂದು ಹೇಳಲಾಗುತ್ತಿದೆ. ನಿನ್ನೆಯಿಂದಲೇ ಅವರು ಪ್ರಜ್ಞಾಹೀನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಿಚ್ಚೈಕಾರನ್ 2 ಸಿನಿಮಾವನ್ನು ಬೇಸಿಗೆಯಲ್ಲಿ ಬಿಡುಗಡೆ ಮಾಡುವುದಾಗಿ ಮೊನ್ನೆಯಷ್ಟೇ ಘೋಷಿಸಿ ಅವರು ಚಿತ್ರೀಕರಣದಲ್ಲಿ ತೊಡಗಿದ್ದರು.

ಚಿತ್ರೀಕರಣದಲ್ಲಿ ಭಾಗಿಯಾಗಿದ್ದವರ ಹೇಳಿಕೆಯ ಪ್ರಕಾರ, ‘ಸಮುದ್ರ ಮಧ್ಯ ದೋಣಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಒಂದು ದೋಣಿ ಮತ್ತೊಂದು ದೋಣಿಯನ್ನು ಅಟ್ಟಿಸಿಕೊಂಡು ಬರುವ ದೃಶ್ಯ ಅದಾಗಿತ್ತು. ರಭಸವಾಗಿ ದೋಣಿಗಳು ಬರುವ ವೇಳೆಯಲ್ಲಿ ಒಂದು ದೋಣಿ ನಿಯಂತ್ರಣ ತಪ್ಪಿ ಮತ್ತೊಂದು ದೋಣಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ವಿಜಯ್ ಆಂಟನಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮಲೇಷ್ಯಾದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ವಿಜಯ್ ಕುಟುಂಬ ಮಲೇಷ್ಯಾಗೆ ಪ್ರಯಾಣ ಬೆಳೆಸಿದೆ.

No Comments

Leave A Comment