Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ದಿಢೀರ್ ರಾಜೀನಾಮೆ ಘೋಷಣೆ

ವೆಲ್ಲಿಂಗ್ಟನ್‌:ಜ 19): ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ತಮ್ಮ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ಘೋಷಿಸಿದ್ದಾರೆ. ತಮ್ಮ ಪಕ್ಷದ ವಾರ್ಷಿಕ ಸಭೆಯಲ್ಲಿ, ಜಸಿಂಡಾ ಅರ್ಡೆರ್ನ್ ಅವರು ಪ್ರಧಾನಿ ಸ್ಥಾನದಲ್ಲಿ ಉಳಿಯಲು ಇನ್ನು ಮುಂದೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಜೀನಾಮೆಯ ಹಿಂದೆ ಯಾವುದೇ ರಹಸ್ಯವಿಲ್ಲ. ಸ್ಥಾನ ತ್ಯಜಿಸಲು ಇದು ಸೂಕ್ತ ಸಮಯ. ಇದೊಂದು ದೊಡ್ಡ ಮತ್ತು ಅತ್ಯಂತ ಹೆಚ್ಚಿನ ಜವಾಬ್ದಾರಿಯುವ ಹುದ್ದೆಯಾಗಿದೆ. ಅದನ್ನು ನಿರ್ವಹಿಸುವುದು ಕೂಡ ಸುಲಭವಲ್ಲ. ಮತ್ತೆ ನಾಲ್ಕು ವರ್ಷಗಳ ಕಾಲ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂದು ಜಸಿಂಡಾ ಅವರು ದಿಢೀರ್ ನಿರ್ಧಾರ ಪ್ರಕಟಿಸಿದ್ದು, ಪಕ್ಷದಲ್ಲಿ ಅಚ್ಚರಿಗೆ ಕಾರಣವಾಗಿದೆ.

2017 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಪ್ರಧಾನ ಮಂತ್ರಿಯಾದ ಅರ್ಡರ್ನ್, ನಂತರ ಮೂರು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತನ್ನ ಲೇಬರ್ ಪಕ್ಷವನ್ನು ಸಮಗ್ರ ವಿಜಯದತ್ತ ಮುನ್ನಡೆಸಿದ್ದರು. ಆದರೆ ಇತ್ತೀಚಿನ ಸಮೀಕ್ಷೆಗಳಲ್ಲಿ ಅವರ ಪಕ್ಷ ಮತ್ತು ವೈಯಕ್ತಿಕ ಜನಪ್ರಿಯತೆ ಕುಸಿತ ಕಂಡಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 14 ರ ಶನಿವಾರದಂದು ಮುಂದಿನ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಮತ್ತು ಅಲ್ಲಿಯವರೆಗೆ ಅವರು ಚುನಾವಣಾ ಸಂಸದರಾಗಿ ಮುಂದುವರಿಯುತ್ತಾರೆ. ತನ್ನ ರಾಜೀನಾಮೆ ಫೆಬ್ರವರಿ 7 ರ ನಂತರ ಜಾರಿಗೆ ಬರಲಿದೆ . ನಾವು ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ನಾನು ಹೊರನಡೆಯುತ್ತಿಲ್ಲ. ಆದರೆ, ನಾವು ಗೆಲ್ಲಬಹುದು ಮತ್ತು ಗೆಲ್ಲುತ್ತೇವೆ ಎಂದು ನಾನು ನಂಬುತ್ತೇನೆ” ಎಂದೂ ನ್ಯೂಜಿಲೆಂಡ್‌ ಪ್ರಧಾನಿ ಹೇಳಿದ್ದಾರೆ.

No Comments

Leave A Comment