Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ವಿಟ್ಲ: ಮನೆಯಲ್ಲಿ ಆಕಸ್ಮಿಕ ಬೆಂಕಿ – ಮಹಿಳೆ ಅಪಾಯದಿಂದ ಪಾರು

ವಿಟ್ಲ:ಜ 19 : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ‌ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದ್ದು, ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.‌

ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ.

ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ ಬಿದ್ದಿದ್ದಾರೆ.

ಘಟನೆಯಿಂದ ಮನೆಯಲ್ಲಿದ್ದ ವಿದ್ಯುತ್ ಉಪಕರಣ ಸೇರಿದಂತೆ ವಸ್ತುಗಳೆಲ್ಲ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಪುತ್ತೂರು ಅಗ್ಮಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

No Comments

Leave A Comment