Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಸಚಿನ್ ದಾಖಲೆ ಮುರಿದು, ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಶುಭ್ ಮನ್ ಗಿಲ್!

ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ಶುಭ್ ಮನ್ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ದಾಖಲೆ ಮುರಿದು ನ್ಯೂಜಿಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಹೈದರಾಬಾದ್ ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶುಭ್ ಮನ್ ಗಿಲ್ ಭರ್ಜರಿ ಬ್ಯಾಟಿಂಗ್ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ತಮ್ಮ ಚೊಚ್ಚಲ ದ್ಪಿಶತಕ ಸಿಡಿಸಿದರು. ಕೇವಲ 149 ಎಸೆತಗಳನ್ನು ಎದುರಿಸಿದ ಗಿಲ್ 9 ಸಿಕ್ಸರ್ ಮತ್ತು 19 ಬೌಂಡರಿಗಳ ನೆರವಿನಿಂದ 208ರನ್ ಗಳನ್ನು ಕಲೆಹಾಕಿದರು. ಆ ಮೂಲಕ ಏಕದಿನ ಕ್ರಿಕೆಟ್ ವೃತ್ತಿ ಜೀವನದ ಚೊಚ್ಚಲ ದ್ವಿಶತಕ ಸಿಡಿಸಿದರು.

ಅಂತೆಯೇ ಈ ದ್ವಿಶತಕ ಮೂಲಕ ಗಿಲ್ ಕ್ರಿಕೆಟ್ ಲೋಕದ ಅಪರೂಪದ ಸಾಧನೆ ಮಾಡಿದ್ದು, ಏಕದಿನ ಕ್ರಿಕೆಟ್ ನಲ್ಲಿ ದ್ವಿಶತಕ ಸಿಡಿಸಿದ ಅತ್ಯಂತ ಚಿಕ್ಕ ವಯಸ್ಸಿನ ಕ್ರಿಕೆಟಿಗ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅಂತೆಯೇ ಜಾಗತಿಕ ಕ್ರಿಕೆಟ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಗರಿಷ್ಛ ವೈಯುಕ್ತಿಕ ಸ್ಕೋರ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಗಿಲ್ ಅಗ್ರಸ್ಥಾನಕ್ಕೇರಿದ್ದಾರೆ. ಮಾತ್ರವಲ್ಲದೇ ಭಾರತದ ನ್ಯೂಜಿಲೆಂಡ್ ವಿರುದ್ಧ ಗರಿಷ್ಛ ಸ್ಕೋರ್ ಮಾಡಿದ ಮತ್ತು ಕಿವೀಸ್ ವಿರುದ್ಧ ದ್ವಿಶತಕ ಸಿಡಿಸಿದ ಭಾರತದ ಮೊದಲ ಕ್ರಿಕೆಟಿಗ ಎಂಬ ಕೀರ್ತಿಗೂ ಗಿಲ್ ಪಾತ್ರರಾಗಿದ್ದಾರೆ.

ಈ ಹಿಂದೆ 1999ರಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ 186 ರನ್ ಗಳನ್ನು ಸಿಡಿಸಿದ್ದರು. ಇದು ಈ ವರೆಗೂ ನ್ಯೂಜಿಲೆಂಡ್ ಪರ ಭಾರತೀಯ ಬ್ಯಾಟರ್ ಒಬ್ಬರು ಸಿಡಿಸಿದ್ದ ಗರಿಷ್ಛ ವೈಯುಕ್ತಿಕ ರನ್ ಗಳಿಕೆಯಾಗಿತ್ತು. ಆದರೆ ನಿನ್ನೆಯ ಪಂದ್ಯದಲ್ಲಿ ಗಿಲ್ 208ರನ್ ಗಳಿಸಿ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಭಾರತದ 5ನೇ ಆಟಗಾರ, 7ನೇ ದ್ವಿಶತಕ
ಇನ್ನು ಏಕದಿನ ಕ್ರಿಕೆಟ್ ನಲ್ಲಿ ಗಿಲ್ ಸಿಡಿಸಿದ ದ್ವಿಶತಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ದಾಖಲಾದ 10ನೇ ದ್ವಿಶತಕವಾಗಿದೆ. ಅಂತೆಯೇ ಭಾರತದ ಪರ ದಾಖಲಾದ 7ನೇ ದ್ವಿಶತಕವಾಗಿದೆ. ಅಲ್ಲದೆ ಭಾರತದ ಪರ ದ್ವಿಶತಕ ಸಿಡಿಸಿದ 5ನೇ ಆಟಗಾರ ಎಂಬ ಕೀರ್ತಿಗೆ ಶುಭ್ ಮನ್ ಗಿಲ್ ಪಾತ್ರರಾಗಿದ್ದಾರೆ. ಈ ಹಿಂದೆ ಭಾರತದ ಪರ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ಇಶಾನ್ ಕಿಶನ್ ಭಾರತದ ಪರ ದ್ವಿಶತಕದ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಶುಭ್ ಮನ್ ಗಿಲ್ ಸೇರಿದ್ದಾರೆ. ಗಿಲ್ ಇಂದು ಸಿಡಿಸಿದ ದ್ವಿಶತಕ ಭಾರತದ ಪರ ದಾಖಲಾದ 7ನೇ ದ್ವಿಶತಕವಾಗಿದೆ. ಈ ಏಳು ದ್ವಿಶತಕಗಳ ಪೈಕಿ ರೋಹಿತ್ ಶರ್ಮಾ 3 ಬಾರಿ ದ್ವಿಶತಕ ಸಿಡಿಸಿದ್ದಾರೆ.

ದ್ವಿಶತಕ ಸಿಡಿಸಿದ ಜಗತ್ತಿನ 8ನೇ ಆಟಗಾರ
ಇನ್ನು ಜಾಗತಿಕ ಕ್ರಿಕೆಟ್ ನಲ್ಲಿ ಏಕದಿನ ಮಾದರಿಯಲ್ಲಿ ದ್ವಿಶತಕ ಸಿಡಿಸಿದ ಜಗತ್ತಿನ 8ನೇ ಆಟಗಾರ ಎಂಬ ಕೀರ್ತಿಗೂ ಗಿಲ್ ಪಾತ್ರರಾಗಿದ್ದಾರೆ. ಭಾರತದ ಆಟಗಾರರು ಮಾತ್ರವಲ್ಲದೇ ವೆಸ್ಟ್ ಇಂಡೀಸ್ ಕ್ರಿಸ್ ಗೇಯ್ಲ್, ನ್ಯೂಜಿಲೆಂಡ್ ನ ಮಾರ್ಟಿನ್ ಗಪ್ಟಿಲ್ ಮತ್ತು ಪಾಕಿಸ್ತಾನದ ಫಖರ್ ಜಮಾನ್ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

No Comments

Leave A Comment