Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಸುಳ್ಳು ಹೇಳಿಕೆಗಳಿಂದ ಜನರನ್ನು ಮೋಸಗೊಳಿಸುತ್ತಿರುವ ಬಿ.ಜೆ.ಪಿ: ಅಶೋಕ್ ಕುಮಾರ್ ಕೊಡವೂರು.

ಉಡುಪಿ:ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಿನ್ನೆ ನಡೆದ ರಾಜೀವ್ ಗಾಂಧಿ ಪಂಚಾಯತ್‌ ರಾಜ್ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಇವರು ಮಾತನಾಡಿ ದೇಶದಲ್ಲಿ ಭಾರತೀಯ ಜನತಾ ಪಕ್ಷವು ಕೇವಲ ಸುಳ್ಳು ಹೇಳಿಕೆಗಳನ್ನು ನೀಡಿ ನಮ್ಮ ದೇಶದ ಜನರನ್ನು ಮೋಸಗೊಳಿಸುವುದೇ ಬಿ.ಜೆ.ಪಿ. ನಾಯಕರ ಕಾಯಕವಾಗಿದೆ. ನಮ್ಮ ದೇಶದ ಬಿ.ಜೆ.ಪಿ. ಆಡಳಿತದ ಪ್ರಧಾನಿಯಿಂದ ಹಿಡಿದು ಮುಖ್ಯಮಂತ್ರಿಯಾದಿಯಾಗಿ ಪಂಚಾಯತ್‌ ಸದಸ್ಯರುಗಳಿಗೂ ಬಿ.ಜೆ.ಪಿ, ಸುಳ್ಳು ಹೇಳಿಕೆಗಳಿಂದ ಜನರನ್ನು ಮೋಸಗೊಳಿಸುತ್ತಿದೆ. ಬೆಲೆಯೇರಿಕೆ ಬಗ್ಗೆ ತುಟಿ ಬಿಚ್ಚದ ಈ ಬಿ.ಜೆ.ಪಿ. ನಾಯಕರಿಗೆ ಸುಳ್ಳೇ ಬಂಡವಾಳ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಭುಜಂಗ ಶೆಟ್ಟಿ ಇವರು ರಾಜ್ಯದ ಬಿ.ಜೆ.ಪಿ. ಸರಕಾರ ಜನಸಾಮಾನ್ಯರಿಗೆ ಸರಕಾರದಿಂದ ಸಿಗುವ ಯಾವುದೇ ಸೌಲಭ್ಯಗಳನ್ನು ನೀಡದೆ ಆ ಹಣವನ್ನು ದುರುಪಯೋಗಪಡಿಸುತ್ತಿದೆ. ಸರಕಾರದ ಸವಲತ್ತುಗಳ ಬಗ್ಗೆ ಜನಸಾಮಾನ್ಯರಿಗೆ ಸರಿಯಾದ ಮಾಹಿತಿ ಇಲ್ಲದಂತಾಗಿದೆ. ಆ ಕೆಲಸವನ್ನು ಪಂಚಾಯತ್‌ ರಾಜ್ ಸಂಘಟನೆಯ ಸದಸ್ಯರು ಮಾಡಿ ತೋರಿಸಬೇಕಾಗಿದೆ ಎಂದು ತಿಳಿಸಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ರೋಶನಿ ಒಲಿವೇರಾ ಇವರು ಪಂಚಾಯತ್‌ ರಾಜ್ ಕಾರ್ಯಕ್ರಮದ ಬಗ್ಗೆ ಸಂಪೂರ್ಣ ವಿವರವನ್ನು ಸಭೆಗೆ ತಿಳಿಸಿದರು. ಉಡುಪಿ ಬ್ಲಾಕ್ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಗೆ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಆಗಮಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ರಾಜ್ಯ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರಾದಶ್ರೀ ದಿನಕ‌ರ ಹೇರೂರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿವಾಕರ್ ಕುಂದರ್, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶ್ರೀಮತಿ ಮಮತಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾದ ಕುಶಲ್ ಶೆಟ್ಟಿ ಇಂದ್ರಾಳಿ, ಕೀರ್ತಿ ಶೆಟ್ಟಿ ಅಂಬಲಪಾಡಿ, ಮಾಜಿ ನಗರಾಭಿವೃದ್ಧಿ ಸಮಿತಿಯ ಅಧ್ಯಕ್ಷರುಗಳಾದ ಬಿ. ನರಸಿಂಹ ಮೂರ್ತಿ, ಗೋಪಾಲಕೃಷ್ಣ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷರಾದ ಹರೀಶ್ ಕಿಣಿ, ಸಹಕಾರಿ ಕಾಂಗ್ರೆಸ್ ಅಧ್ಯಕ್ಷರಾದ ಅಣ್ಣಯ್ಯ ಶೇರಿಗಾರ್, ನಾಗೇಶ್ ಉದ್ಯಾವರ, ಶ್ರೀಮತಿ ಐರಿನ್ ಅಂದ್ರಾದೆ, ಹಿರಿಯಡ್ಕ ಪಂಚಾಯತ್ ರಾಜ್ ಸಮಿತಿಯ ಅಧ್ಯಕ್ಷ ಸುಧೀರ್ ನಾಯಕ್‌ ಹಾಗೂ ನೂತನವಾಗಿ ಅಧಿಕಾರ ಸ್ವೀಕರಿಸಿದ ಎಲ್ಲಾ ಪದಾಧಿಕಾರಿಗಳು, ಉಪಸ್ಥಿತರಿದ್ದರು.

ಸಭೆಯ ಆರಂಭದಲ್ಲಿ ಶೇಖರ್ ಶೆಟ್ಟಿ ಇವರು ಸ್ವಾಗತಿಸಿ ,ಸುಧೇಶ್ ಶೇಟ್ ವಂದಿಸಿದರು, ಕಾರ್ಯಕ್ರಮವನ್ನು ಬೈಂದೂರು ಪಂಚಾಯತ್ ರಾಜ್ ಸಂಘಟನೆಯ ಮುಖ್ಯಸ್ಥರಾದ ಆನಂದ್ ಇವರು ನಿರ್ವಹಿಸಿದರು.

No Comments

Leave A Comment