Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಭ್ರಷ್ಟಾಚಾರದ ವಿರುದ್ದ ಪ್ರಜಾಧ್ವನಿ ಮೊಳಗಲಿ

ಉಡುಪಿ: ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ. ಆಳುವ ಬಿಜೆಪಿ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಮೂಲಕ ಮತ್ತೆ ಅಧಿಕಾರ ಹಿಡಿಯುವ ಹುನ್ನಾರದಲ್ಲಿದೆ. ಈ ಬಗ್ಗೆ ಜನಸಾಮಾನ್ಯರು ತಮ್ಮ ಸ್ವರವನ್ನು ಎತ್ತಬೇಕಾಗಿದೆ. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷ ನಾಯಕ ಎಸ್. ಸಿದ್ದರಾಮಯ್ಯ ನೇತೃತ್ವದಲ್ಲಿ ಹೊರಟ ಪ್ರಜಾಧ್ವನಿ ಬಸ್ ಯಾತ್ರೆ ಯಶಸ್ವಿಯಾಗಲಿ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಕ್ರಿಶ್ಚಿಯನ್ ಹೈಸ್ಕೂಲು ಮೈದಾನದಲ್ಲಿ ನಡೆಯುವ ಪ್ರಜಾಧ್ವನಿ ಯಾತ್ರೆ ಸಮಾವೇಶದ ಚಪ್ಪರ ನಿರ್ಮಾಣಕ್ಕೆ ಗುರುವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ರಾಜ್ಯ ಸಂಯೋಜಕ ದಿನೇಶ್ ಪುತ್ರನ್, ಕಾಂಗ್ರೆಸ್ ನಾಯಕರಾದ ಕೃಷ್ಣಮೂರ್ತಿ ಆಚಾರ್ಯ, ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ನ, ಪ್ರಖ್ಯಾತ್ ಶೆಟ್ಟಿ, ಎಂ. ಎ. ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ವೆರೋನಿಕಾ ಕರ್ನೇಲಿಯೊ, ರೋಶನಿ ಒಲಿವರ್, ಡಾ. ಸುನೀತಾ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್,ಸುಹೇಲ್ ರಹಮತ್, ಶಬರೀಶ್ ಸುವರ್ಣ ಜಯ ಸೇರಿಗಾರ್, ಕಾರ್ಕಳ ಮಹಮ್ಮದ್ ಇರ್ಷಾದ್, ಇಸ್ಮಾಯಿಲ್ ಆತ್ರಾಡಿ, ಜಯ ಕುಮಾರ್, ದಿಲೀಪ್ ಹೆಗ್ಡೆ ಕುಕ್ಕೆಹಳ್ಳಿ, ಆನಂದ ಕಿದಿಯೂರು, ಜೀತೇಶ್ ಕುಮಾರ್ ಮೊದಲಾದವರಿದ್ದರು.

No Comments

Leave A Comment