Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ವಿಧಾನಸಭಾ ಚುನಾವಣೆಗೆ ಕೇಜ್ರಿವಾಲ್ ಪಕ್ಷ ತಯಾರಿ: ರಾಜ್ಯದಲ್ಲಿ ಆಮ್‌ ಆದ್ಮಿ ಪಕ್ಷ ಘಟಕ ಪುನಾರಚನೆ, ಮತ್ತೆ ಪೃಥ್ವಿರೆಡ್ಡಿ ಅಧ್ಯಕ್ಷ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಚುನಾವಣೆಗೆ ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ಇದರಂತೆ ಸೋಮವಾರ ಪಕ್ಷವು ರಾಜ್ಯ ಘಟಕವನ್ನು ಪುನರ್ ರಚನೆ ಮಾಡಿದ್ದು, ರಾಜ್ಯಾಧ್ಯಕ್ಷರನ್ನಾಗಿ ಪೃಥ್ವಿರೆಡ್ಡಿಯವರನ್ನೇ ಮುಂದುವರೆಸಿದೆ.

“ಕಳೆದ ವಾರ ಕರ್ನಾಟಕದಲ್ಲಿ ಆಮ್‌ ಆದ್ಮಿ ಪಕ್ಷವು ರಾಜ್ಯ ಹಾಗೂ ಜಿಲ್ಲಾ ಘಟಕಗಳನ್ನು ವಿಸರ್ಜನೆ ಮಾಡಿತ್ತು. ಗ್ರಾಮ ಸಂಪರ್ಕ ಅಭಿಯಾನದಿಂದಾಗಿ (ಜಿಎಸ್‌ಎ) ಆಮ್‌ ಆದ್ಮಿ ಪಕ್ಷಕ್ಕೆ ಕನ್ನಡಿಗರಿಂದ ಅಭೂತಪೂರ್ವ ಬೆಂಬಲ ದೊರೆತಿದೆ. ಇದರ ಜೊತೆಗೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿಯೂ ಆಪ್ ಉತ್ತಮ ಸಾಧನೆ ಮಾಡಿದೆ. ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮುವ ವಿಶ್ವಾಸ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷವು ಈ ಬಾರಿ ಕರ್ನಾಟಕದಲ್ಲಿ ನಡೆಯುವ ಎಲ್ಲಾ 224 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದೆ.

ಹೊಸದಾಗಿ ಪುನರ್‌ರಚಿಸಲಾದ ರಾಜ್ಯ ಎಎಪಿಯಲ್ಲಿ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಮುಂದವರೆದಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಸಂಚಿತ್ ಸಾಹ್ನಿ ಇದ್ದಾರೆ. ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿ ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ಸಂವಹನ ಉಸ್ತುವಾರಿಯಾಗಿ ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಸ್ಯಾಂಡಲ್ ವುಡ್ ನಟ-ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕದ ಜೊತೆಗೆ ಕೇರಳದಲ್ಲಿಯೂ ಆಮ್ ಆದ್ಮಿ ಪಕ್ಷವು ತನ್ನ ಘಟಕವನ್ನು ಪುನರಾಚನೆ ಮಾಡಿದೆ ಎಂದು ತಿಳಿದುಬಂದಿದೆ.

No Comments

Leave A Comment