Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಕಾಲೇಜು ಬಸ್ ಹಾಗೂ ಗ್ಯಾಸ್ ಲಾರಿ ನಡುವೆ ಅಪಘಾತ: ಉಡುಪಿ ಮೂಲದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್

ಕೊಟ್ಟಿಗೆಹಾರ: ಕಾಲೇಜು ಬಸ್ ಹಾಗೂ ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿಯಾದ ಪರಿಣಾಮ ಬಸ್ ನ ಚಾಲಕ ಸೇರಿದಂತೆ  ಕಾಲೇಜು ವಿದ್ಯಾರ್ಥಿಗಳಿಗೆ ಗಾಯವಾಗಿದೆ.

ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್, ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ನಡುವೆ ಮೂಖಾಮುಖಿ ಡಿಕ್ಕಿಯಾಗಿದೆ.

ಅಪಘಾತದ ಪರಿಣಾಮ ಬಸ್ಸಿನ ಚಾಲಕನಿಗೆ ತೀವ್ರ ಪೆಟ್ಟಾಗಿದ್ದು, ಚಾಲಕನನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಘಟನೆಯಲ್ಲಿ  ಕಾಲೇಜು ಬಸ್ ನಲ್ಲಿದ್ದ ಉಡುಪಿಯ ದಂತ  ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಣಕಲ್ ಠಾಣಾ ವ್ಯಾಪ್ತಿಯಲ್ಲಿ  ರಾಷ್ಟ್ರೀಯ ಹೆದ್ದಾರಿ 73  ಮೂಡಿಗೆರೆ ತಾಲೂಕಿನ ಚಕ್ ಮಕ್ಕಿ ಬಳಿ ಈ ಅಪಘಾತ ಸಂಭವಿಸಿದೆ.

No Comments

Leave A Comment