Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಮಂಡ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಸ್ವಪಕ್ಷೀಯರಿಂದಲೇ #GoBackAshok ಅಭಿಯಾನ, ಪೋಸ್ಟರ್ ವೈರಲ್

ಮಂಡ್ಯ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಮಂಡ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಆರ್ ಅಶೋಕ್ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ.

ಹೌದು.. ಸಕ್ಕರೆ ನಾಡಿನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಆರ್.ಅಶೋಕ್ (R Ashok) ವಿರುದ್ಧ ಇದೀಗ ಬಿಜೆಪಿಗರೇ ಸಿಡಿದೆದ್ದಿದ್ದಾರೆ. ಮಂಡ್ಯ (Mandya) ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ ಹಿನ್ನೆಲೆಯಲ್ಲಿ ಬಿಜೆಪಿಗರಿಂದಲೇ ಭಾರೀ ವಿರೋಧ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ಅಭಿಯಾನ (Go Back Campaign) ಶುರುಮಾಡಿದ್ದಾರೆ.

ಬಿಜೆಪಿ (BJP)-ಜೆಡಿಎಸ್ (JDS) ಹೊಂದಾಣಿಕೆ ಸಹಿಸುವುದಿಲ್ಲ. ನಾವು ಬಿಜೆಪಿ ಕಾರ್ಯಕರ್ತರು. ಗೋ ಬ್ಯಾಕ್ ಆರ್.ಅಶೋಕ್. ಮಂಡ್ಯದ ಸ್ವಾಭಿಮಾನಿ ಬಿಜೆಪಿ ಕಾರ್ಯಕರ್ತರೇ ಸಾಕು. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸ್ಕೊತ್ತೀವಿ. ದಯವಿಟ್ಟು ನೀವು ವಾಪಸ್ ಹೋಗಿ ಎಂದು ಅಭಿಯಾನ ಪ್ರಾರಂಭಿಸಿದ್ದಾರೆ.

ಅಶೋಕ್ ಮಂಡ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡುತ್ತಾರೆ. ಅಶೋಕ್‍ರಿಂದ ಮಂಡ್ಯದಲ್ಲಿ ಬಿಜೆಪಿ ಬೆಳೆಯಲ್ಲ. ಅಶೋಕ್ ಗೋಬ್ಯಾಕ್ ಎಂಬ ಕೂಗು ಕೇಳಿಬಂದಿದೆ. ಬಾಯ್ಕಟ್, ಗೋ ಬ್ಯಾಕ್ ಅಶೋಕ್ ಎಂಬ ಸಾಲುಗಳನ್ನು ಬರೆದು ಮಂಡ್ಯ ಆರ್ ಪಿ ರಸ್ತೆಯ ಗೋಡೆಗಳ ಮೇಲೂ ಪೋಸ್ಟರ್ ಅಂಟಿಸಿದ್ದಾರೆ.

No Comments

Leave A Comment