Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಮಂಗಳೂರು: ಜ 26: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜ. 26ರ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

No Comments

Leave A Comment