Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ವೆಸ್ಟ್ ಬ್ಯಾಂಕ್ ಮೇಲೆ ಇಸ್ರೇಲಿ ಸೇನೆಯಿಂದ ರಾಕೆಟ್ ದಾಳಿ: 9 ಪ್ಯಾಲೆಸ್ತೀನಿಯರ ಸಾವು

ಇಸ್ರೇಲಿ ಪಡೆಗಳು ವೆಸ್ಟ್ ಬ್ಯಾಂಕ್ ಸಂಘರ್ಷ ವಲಯಗಳ ಮೇಲೆ ರಾಕೆಟ್ ದಾಳಿ ನಡೆಸಿದ್ದು 60ರ ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ಒಂಬತ್ತು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ.

ರಾಕೆಟ್ ದಾಳಿಯಲ್ಲಿ ಕನಿಷ್ಠ ಏಳು ಉಗ್ರಗಾಮಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಎರಡು ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು ಗಾಜಾ ಉಗ್ರಗಾಮಿಗಳು ರಾಕೆಟ್‌ಗಳನ್ನು ಉಡಾಯಿಸಿತ್ತು. ಇದರ ಬೆನ್ನಲ್ಲೇ ಇಸ್ರೇಲ್ ವೈಮಾನಿಕ ದಾಳಿ ನಡೆಸಿತು. ಗಾಜಾ ಪಟ್ಟಿಯನ್ನು ನಿಯಂತ್ರಿಸುವ ಇಸ್ಲಾಮಿ ಉಗ್ರಗಾಮಿ ಸಂಘಟನೆ ಹಮಾಸ್ ಪ್ರತೀಕಾರದ ಬೆದರಿಕೆ ಹಾಕಿದೆ.

ಜೆನಿನ್ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲ್ ಸೇನೆ ಹಗಲಿರುಳು ಕಾರ್ಯಾಚರಣೆ ನಡೆಸಿದಾಗ ಈ ಘರ್ಷಣೆ ನಡೆದಿದೆ. ಇಸ್ರೇಲಿಗಳ ವಿರುದ್ಧ ಸನ್ನಿಹಿತವಾದ ದಾಳಿಯನ್ನು ತಡೆಯಲು ಈ ಕಾರ್ಯಾಚರಣೆ ನಡೆಸಲಿದೆ ಎಂದು ಇಸ್ರೇಲಿ ಸೇನೆ ಹೇಳಿದೆ.

ಇಸ್ರೇಲ್‌ನ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ಭದ್ರತಾ ಬ್ರೀಫಿಂಗ್ ನಂತರ ಆಕ್ರಮಿತ ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯೊಂದಿಗೆ ಇಸ್ರೇಲ್‌ನ ಗಡಿಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಪ್ಯಾಲೇಸ್ಟಿನಿಯನ್ ದಾಳಿಯ ನಂತರ ಇಸ್ರೇಲ್ ವೆಸ್ಟ್ ಬ್ಯಾಂಕ್ ಮೇಲೆ ರಾತ್ರಿ ದಾಳಿಗಳನ್ನು ಪ್ರಾರಂಭಿಸಿದ್ದರಿಂದ ಇಸ್ರೇಲಿಗಳು ಮತ್ತು ಪ್ಯಾಲೆಸ್ಟೀನಿಯಾದ ನಡುವೆ ಉದ್ವಿಗ್ನತೆ ಹೆಚ್ಚಿದೆ. ಇಸ್ರೇಲ್‌ನ ಬಲಪಂಥೀಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ಯಾಲೆಸ್ಟೀನಿಯಾದವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದರಿಂದ ಈ ತಿಂಗಳು ಸಂಘರ್ಷ ತೀವ್ರಗೊಂಡಿದೆ.

No Comments

Leave A Comment