
ಇಬ್ಬರು ಅಧಿಕಾರಿಗಳ ಸೇವಾ ರಿಜಿಸ್ಟರ್ ನಾಪತ್ತೆ: ಮಧುಗಿರಿ ಪಿಡಬ್ಲ್ಯುಡಿ ವ್ಯವಸ್ಥಾಪಕ ಆತ್ಮಹತ್ಯೆ
ಮಧುಗಿರಿ: ಕಚೇರಿಯಲ್ಲಿನ ಇಬ್ಬರು ಅಧಿಕಾರಿಗಳ ಸೇವಾ ಪುಸ್ತಕ (ಸರ್ವೀಸ್ ರಿಜಿಸ್ಟರ್) ಕಳೆದು ಹೋಗಿದ್ದು ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿಲ್ಲವೆಂದು ಮನ ನೊಂದ ಮಧುಗಿರಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ವಿಭಾಗ ಕಚೇರಿಯ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಕ್ಷ್ಮೀನರಸಿಂಹಯ್ಯ (56) ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕೆಲಸ ಮಾಡುತ್ತಿದ್ದರು.
ಗುರುವಾರ ರಾತ್ರಿ ಶಿವಗಂಗೆ ಪ್ರವಾಸಿ ಮಂದಿರಕ್ಕೆ ತೆರಳಿದ್ದ ಲಕ್ಷ್ಮೀನರಸಿಂಹಯ್ಯ ಶುಕ್ರವಾರ ಮುಂಜಾನೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ.